ಮಧ್ಯಾಹ್ನ 2 ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ಅಲ್ಲಿ ನಿತೀಶ್ ಕುಮಾರ್ ಅವರ ಉತ್ತರಾಧಿಕಾರಿಯ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆಯಿದ್ದು, ಮಧ್ಯಾಹ್ನ 4 ಗಂಟೆಗೆ ಎನ್ಡಿಎ ಶಾಸಕಾಂಗ ಸಭೆಯಲ್ಲಿ ಉತ್ತರಾಧಿಕಾರಿಯ ಘೋಷಣೆಯಾಗಲಿದೆ. ಹಾಲಿ ಡಿಸಿಎಂ ಸಾಮ್ರಾಟ್ ಚೌಧರಿ ಹೆಸರು ಮುಂಚೂಣಿಯಲ್ಲಿದ್ದು, ಸ್ವತಃ ಸಿಎಂ ನಿತೀಶ್ ಕುಮಾರ್ ಅವರೇ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ ಎನ್ನಲಾಗಿದೆ.