ಚೆನ್ನೈ: ಮುಂಬರುವ ತಮಿಳುನಾಡು ಚುನಾವಣೆಯಲ್ಲಿ ಸೀಟು ಹಂಚಿಕೆ ಜೊತೆ ಅಧಿಕಾರ ಹಂಚಿಕೆ ಬಗ್ಗೆ ನಿರ್ಧರಿಸಬೇಕೆಂಬ ಕಾಂಗ್ರೆಸ್ ನಾಯಕರ ಬೇಡಿಕೆಯನ್ನು ಸ್ಪಷ್ಟವಾಗಿ ತಿರಸ್ಕರಿಸಿರುವ ಸಿಎಂ ಎಂ.ಕೆ.ಸ್ಟಾಲಿನ್(CM M K Stalin), ಕಾಂಗ್ರೆಸ್ ಜೊತೆಗೆ ಮೈತ್ರಿ ಮುಂದುವರೆಯುತ್ತದೆ. ಆದರೆ ಅಧಿಕಾರ ಹಂಚಿಕೆಯ ಪ್ರಶ್ನೆಯೇ ಇಲ್ಲ. ತಮಿಳುನಾಡಿನಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ನಡೆಯಲ್ಲ ಎಂದು ಹೇಳಿದ್ದಾರೆ.