ಮತ್ತೊಂದೆಡೆ, ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಸುಮಾರು 60 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ ಎಂಬ ವಿಷಯ ಸದನದಲ್ಲಿ ಕಿಚ್ಚು ಹಚ್ಚಿದೆ. ಟಿಎಂಸಿ ಮತ್ತು ಕಾಂಗ್ರೆಸ್ ಸದಸ್ಯರು "ವೋಟ್ ಚೋರಿ ಬಂದ್ ಮಾಡಿ", "ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ" ಎಂದು ಘೋಷಣೆ ಕೂಗುತ್ತಾ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಇದರಿಂದಾಗಿ ಕಲಾಪವು ಪದೇ ಪದೇ ಅಸ್ತವ್ಯಸ್ತಗೊಂಡು ಮುಂದೂಡಿಕೆಯಾಯಿತು.