ಮುಂಬೈ: ರಾಷ್ಟ್ರವಾದಿ ಕಾಂಗ್ರೆಸ್ ಪಾರ್ಟಿ (ಶರದ್ ಪವಾರ್ ಬಣ) ಎನ್‌ಡಿಎ ಒಕ್ಕೂಟ ಸೇರದೆ ಮುಂಗಾರು ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆಗಳಿಗೆ ಬೆಂಬಲ ನೀಡಲಿದೆ ಎಂಬ ವರದಿಗಳನ್ನು ಸಂಸದೆ ಸುಪ್ರಿಯಾ ಸುಳೆ (Supriya Sule) ತಳ್ಳಿಹಾಕಿದ್ದಾರೆ. ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಇಂತಹ ವರದಿಗಳು ಕೇವಲ ಮೂಲಗಳ ಆಧಾರಿತವಾಗಿದ್ದು, ಪಕ್ಷದಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ ಎಂದು ಬುಧವಾರ ಸ್ಪಷ್ಟಪಡಿಸಿದ್ದಾರೆ.