ಮೆಲ್ಬರ್ನ್ನ ಮಾರ್ವೆಲ್ ಕ್ರೀಡಾಂಗಣದಲ್ಲಿ ನಡೆದ ಜುಲೈ 9 ರ ಈ ಬೃಹತ್ ಕಾರ್ಯಕ್ರಮದಲ್ಲಿ ಸುಮಾರು 30,000ಕ್ಕೂ ಹೆಚ್ಚು ಭಾರತೀಯ ಮೂಲದ ಜನ ಭಾಗವಹಿಸಿದ್ದರು. ಆದರೆ, ಈ ಕಾರ್ಯಕ್ರಮದ ಜನಸ್ತೋಮವನ್ನು ಬಾಡಿಗೆ ಜನ ಎಂದು ಕಾಂಗ್ರೆಸ್ ವಕ್ತಾರ, ರಾಜ್ಯಸಭಾ ಸದಸ್ಯ ಪವನ್ ಖೇರಾ ಸೇರಿ ಹಲವು ನಾಯಕರು ಆರೋಪಿಸಿದ್ದರು. ಅಲ್ಲದೆ, ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ವಿಶೇಷ ವಿಮಾನಗಳನ್ನು ವ್ಯವಸ್ಥೆ ಮಾಡಲಾಗಿತ್ತು ಎಂಬ ಮಾಧ್ಯಮ ವರದಿಯೊಂದನ್ನು ಹಂಚಿಕೊಂಡಿದ್ದರು.