ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿಲ್ಲ; ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ | Nirmala Sitharaman

ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Published on
ನವದೆಹಲಿ: ದೇಶದ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾಪ ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ಸೋಮವಾರ(ಮಾ. 23) ಸಂಸತ್​ನಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿ ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸಿ ಮಾತನಾಡಿರುವ ಅವರು, ರೈತರ ಆರ್ಥಿಕ ಸ್ಥಿತಿಗತಿಗಳನ್ನು ಬಲಪಡಿಸಲು ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಇತ್ಯಾದಿಗಳ ಮೂಲಕ ಬೆಳೆ ವಿಮೆ ಮತ್ತು ಭೂ ಹಿಡುವಳಿ ರೈತರಿಗೆ ನೇರ ನಗದು ವರ್ಗಾವಣೆಯನ್ನು ನೀಡುತ್ತಿದೆ. ಆದರೆ ಸಂಪೂರ್ಣ ಸಾಲ ಮನ್ನಾ ಮಾಡಲು ಪ್ರಸ್ತಾವನೆ ಇಲ್ಲ ಎಂದು ಹೇಳಿದ್ದಾರೆ.
ರೈತರನ್ನು ಆರ್ಥಿಕವಾಗಿ ಬೆಂಬಲಿಸಲು ಕಿಸಾನ್ ಕ್ರೆಡಿಟ್ ಕಾರ್ಡ್(ಕೆಸಿಸಿ) ಮೂಲಕ ಸಕಾಲಿಕ ಮತ್ತು ಸಾಕಷ್ಟು ಸಾಲ ಸೇರಿದಂತೆ, ಬಡ್ಡಿ ಸಹಾಯಧನ ಯೋಜನೆ(ಎಂಐಎಸ್ಎಸ್) ಅಡಿಯಲ್ಲಿ ಸಬ್ಸಿಡಿ ಬಡ್ಡಿದರದಲ್ಲಿ ರೂ. 3 ಲಕ್ಷದವರೆಗಿನ ಬೆಳೆ ಸಾಲವನ್ನು ನೀಡಲಾಗುತ್ತದೆ. ಮತ್ತು ಸಕಾಲಿಕ ಮರುಪಾವತಿಗೆ ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದಲ್ಲದೆ, ಸರ್ಕಾರವು ಸಂಬಂಧಿತ ಸಾಲಗಳನ್ನು ಒಳಗೊಂಡಂತೆ ಮೇಲಾಧಾರ ರಹಿತ ಅಲ್ಪಾವಧಿ ಕೃಷಿ ಸಾಲಗಳನ್ನು 1.60 ಲಕ್ಷ ರೂ.ಗಳಿಂದ 2.00 ಲಕ್ಷ ರೂ.ಗಳಿಗೆ ಹೆಚ್ಚಿಸಿದೆ. ಆರ್‌ಬಿಐ ಹೊರಡಿಸಿದ ಆದ್ಯತಾ ವಲಯ ಸಾಲ ಮಾರ್ಗಸೂಚಿಗಳ ಅಡಿಯಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯಿಂದ ಕೃಷಿ ಸೇರಿದಂತೆ ಆರ್ಥಿಕತೆಯ ಆದ್ಯತೆಯ ವಲಯಗಳಿಗೆ ಸಾಕಷ್ಟು ಸಾಲದ ಹರಿವನ್ನು ಖಚಿತಪಡಿಸಿದೆ ಎಂದು ಮಾಹಿತಿ ನೀಡಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net