ಆಹಾರ ಇಲಾಖೆಯ ಸಹಾಯಕ ಆಯುಕ್ತ ಮಾಣಿಕ್ ಚಂದ್ರ ಸಿಂಗ್ ಅವರ ಪ್ರಕಾರ, "ನಿಷೇಧದ ಹೊರತಾಗಿಯೂ ಕೆಲವು ಕಡೆಗಳಲ್ಲಿ ಆನ್ಲೈನ್ ಮೂಲಕ ಮಾಂಸಾಹಾರ ಪೂರೈಕೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಇದು ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿರುವುದರಿಂದ, ಎಲ್ಲಾ ಡೆಲಿವರಿ ಕಂಪನಿಗಳು ಮತ್ತು ಹೋಟೆಲ್ ಮಾಲೀಕರಿಗೆ ಸೂಚನೆ ನೀಡಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು," ಎಂದು ತಿಳಿಸಿದ್ದಾರೆ.