ಕೋಲ್ಕತ್ತಾದ ಮತ್ತೊಂದು ಸರ್ಕಾರಿ ಕಾಲೇಜು & ಆಸ್ಪತ್ರೆಯ ಶೌಚಾಲಯದಲ್ಲಿ ನರ್ಸ್ ಅನುಮಾನಸ್ಪದವಾಗಿ ಸಾ* | Nurse

ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ
ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ
Published on
ಕೋಲ್ಕತ್ತಾ: ಆರ್​.ಜಿ.ಕರ್ ಮೆಡಿಕಲ್ ಕಾಲೇಜು & ಆಸ್ಪತ್ರೆಯಲ್ಲಿ ಕಿರಿಯ ವೈದ್ಯ ಸಾವು ಪ್ರಕರಣ ವಿಚಾರಣೆ ನಡೆಯುತ್ತಿರುವಾಗಲೇ, ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬುಧವಾರ(ಆ. 12) 30 ವರ್ಷದ ನರ್ಸ್(Nurse dies) ಒಬ್ಬರು ಅನುಮಾನಸ್ಪದವಾಗಿ ಶೌಚಾಲಯದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ನರ್ಸ್ ಆಸ್ಪತ್ರೆಯ ಹೈ-ಡಿಪೆಂಡೆನ್ಸಿ ಯೂನಿಟ್ (ಎಚ್‌ಡಿಯು) ನಲ್ಲಿ ರಾತ್ರಿ ಕರ್ತವ್ಯದಲ್ಲಿದ್ದರು. ರಾತ್ರಿ 8 ಗಂಟೆಗೆ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದರು. ಮತ್ತು ರಾತ್ರಿ 10.30ರ ಸುಮಾರಿಗೆ ಸ್ತ್ರೀರೋಗ ವಿಭಾಗದ ಕಟ್ಟಡದಲ್ಲಿರುವ ಪ್ರಸವಪೂರ್ವ ವಾರ್ಡ್‌ನಲ್ಲಿರುವ ಸಿಬ್ಬಂದಿ ಶೌಚಾಲಯಕ್ಕೆ ಹೋಗಿದ್ದರು ಎನ್ನಲಾಗಿದೆ.
ಬಳಿಕ ಸ್ವಲ್ಪ ಸಮಯವಾದರೂ ಆಕೆ ಹಿಂತಿರುಗದಿದ್ದಾಗ, ಸಹೋದ್ಯೋಗಿಗಳು ಆಕೆಯನ್ನು ನೋಡಲು ಹೋದಾಗ ಶೌಚಾಲಯದ ಬಾಗಿಲು ಲಾಕ್ ಆಗಿರುವುದು ಕಂಡುಬಂದಿದೆ. ಪದೇ-ಪದೇ ಬಾಗಿಲು ಬಡಿದರೂ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ, ಇಬ್ಬರು ಬಾಗಿಲು ಒಡೆದು ನೋಡಿದಾಗ ಆಕೆ ನೆಲದ ಮೇಲೆ ಪ್ರಜ್ಞಾಹೀನಳಾಗಿ ಬಿದ್ದಿರುವುದು ಕಂಡುಬಂದಿದೆ.
ತಕ್ಷಣ ಸಹೋದ್ಯೋಗಿಗಳು ಆಸ್ಪತ್ರೆಗೆ ವೈದ್ಯರಿಗೆ ಮಾಹಿತಿ ನೀಡಿದ್ದಾರೆ. ಅವರು ಬಂದು ಪರೀಕ್ಷಿಸಿದಾಗ ನರ್ಸ್ ಮೃತಪಟ್ಟಿರೋದು ಗೊತ್ತಾಗಿದೆ. ತಕ್ಷಣ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಎಂಟಲಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ನರ್ಸ್‌ನ ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ. ಮತ್ತು ಸ್ಥಳದಲ್ಲಿ ಯಾವುದೇ ಆತ್ಮಹತ್ಯಾ ಪತ್ರ ಪತ್ತೆಯಾಗಿಲ್ಲ. ಇಂಜೆಕ್ಷನ್ ಮೂಲಕ ನೀಡಲಾದ ಅರಿವಳಿಕೆ ಔಷಧದ ಮಿತಿಮೀರಿದ ಸೇವನೆಯಿಂದ ನರ್ಸ್ ಸಾವನ್ನಪ್ಪಿರಬಹುದು ಎಂದು ಶಂಕಿಸಿದ್ದಾರೆ. ತನಿಖೆ ನಡೆಯುತ್ತಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net