ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಸಿಬಿಎಸ್ಸಿ, ಜೆಇಇ ಅಡ್ವಾನ್ಸ್ ಸೇರಿದಂತೆ ಪರೀಕ್ಷಾ ವ್ಯವಸ್ಥೆಯಲ್ಲಿ ನಡೆದಿರುವ ಲೋಪವನ್ನು ಉಲ್ಲೇಖಿಸಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) (Cockroach Janta Party )ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು ಜೂನ್.6ರಂದು ಜಂತರ್ ಮಂತರ್ (Jantar Mantar )ಬಳಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದಾಗಿ ಕರೆ ನೀಡಿದ್ದರು. ಆ ಸಂಬಂಧ ಇಂದು ಎಕ್ಸ್ನಲ್ಲಿ ಮತ್ತೊಂದು ಮಾಹಿತಿ ಹಂಚಿಕೊಂಡಿದ್ದಾರೆ.