ಜಮ್ಮು-ಕಾಶ್ಮೀರದಲ್ಲಿ ಆಪರೇಷನ್ ಟ್ರಾಶಿ-I ಕಾರ್ಯಾಚರಣೆ; ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು | Operation Trashi-I
ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸೈಫುಲ್ಲಾ
Published on:
Copied
Follow Us
ಶ್ರೀನಗರ: ಜಮ್ಮು-ಕಾಶ್ಮೀರದ ಕಿಸ್ತ್ವಾರ್ ಜಿಲ್ಲೆಯಲ್ಲಿ ಇಂದು(ಫೆ. 22) ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಪಾಕ್ನ ಜೈಶ್-ಎ-ಮೊಹಮ್ಮದ್ ಸಂಘಟನೆಯ ಪ್ರಮುಖ ಉಗ್ರ ಸೇರಿ ಮೂವರನ್ನು ಹೊಡೆದುರುಳಿಸಲಾಗಿದೆ ಎಂದು ವರದಿಯಾಗಿದೆ.
ಚಟ್ರೂ ಬೆಲ್ಟ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಗುಪ್ತಚರ ಮಾಹಿತಿ ಮೇರೆಗೆ ಬೆಳಗ್ಗೆ 11 ಗಂಟೆಗೆ ಸುಮಾರಿಗೆ ಸೇನೆ, ಸಿಆರ್ಪಿಎಫ್ ಹಾಗೂ ಪೊಲೀಸರು ಆಪರೇಷನ್ ಟ್ರಾಶಿ-I ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಬೆಟ್ಟದ ತಪ್ಪಲಿನಲ್ಲಿರುವ ಮಣ್ಣಿನ ಮನೆಯೊಳಗೆ ಉಗ್ರರು ಅಡಗಿಕೊಂಡ ಬಗ್ಗೆ ಮಾಹಿತಿ ಹಿನ್ನೆಲೆ ಭದ್ರತಾ ಪಡೆಗಳು ಹತ್ತಿರ ತೆರಳುತ್ತಿದ್ದಂತೆ ಉಗ್ರರು ಗುಂಡು ಹಾರಿಸಿದ್ದಾರೆ. ಈ ವೇಳೆ ಕಡೆಯಿಂದ ಗುಂಡಿನ ಚಕಮಕಿ ನಡೆದಿದೆ. ಈ ದಾಳಿಯಲ್ಲಿ 20 ಬಾರಿ ಸೇನೆಯ ದಾಳಿಯಿಂದ ತಪ್ಪಿಸಿಕೊಂಡಿದ್ದ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರಲ್ಲಿ ಒಬ್ಬನಾದ ಸೈಫುಲ್ಲಾ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಈ ಕುರಿತು ಎಕ್ಸ್ನಲ್ಲಿ ಮಾಹಿತಿ ನೀಡಿರುವ ಭಾರತೀಯ ಸೇನೆ, ಯುದ್ಧತಂತ್ರದ ನಿಖರತೆ, ತಡೆರಹಿತ ಸಿನರ್ಜಿ ಮತ್ತು ದೃಢನಿಶ್ಚಯದ ಆಕ್ರಮಣಶೀಲತೆಯನ್ನು ಪ್ರದರ್ಶಿಸುತ್ತಾ, ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರನ್ನು ತಟಸ್ಥಗೊಳಿಸಲಾಗಿದೆ ಎಂದು ಪೋಸ್ಟ್ ಮಾಡಿದೆ (ಏಜೆನ್ಸೀಸ್).