ಸದ್ಯ ವೈರಲ್ ಆಗಿರುವ ಫೋಟೋದಲ್ಲಿ ಒಂದು ಮನೆಯ ಹಿತ್ತಲನ್ನು ನೋಡಬಹುದು. ಅಲ್ಲಿ ಗಿಡಗಂಟಿಗಳು ಬೆಳೆದುಕೊಂಡಿವೆ ಮತ್ತು ಕಟ್ಟಿಗೆಗಳು ಬಿದ್ದಿವೆ. ಅವುಗಳ ನಡುವೆ 2.5 ಮೀಟರ್ ಉದ್ದದ ಹಾಗೂ ಭಾರಿ ಗಾತ್ರದ ಒಂದು ಹೆಬ್ಬಾವು ಅಡಗಿಕೊಂಡಿದೆ. ಆ ಹೆಬ್ಬಾವು ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬೇಕು. ಆದರೆ, ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಅಷ್ಟು ಸುಲಭವಾಗಿ ನಮ್ಮ ಕಣ್ಣಿಗೆ ಕಾಣುವುದಿಲ್ಲ. ಹೀಗಾಗಿ ನೀವು ಕಣ್ಣಿಗೆ ಮಾತ್ರವಲ್ಲದೆ, ತಲೆಗೆ ಕೊಂಚ ಕೆಲಸ ಕೊಟ್ಟು ಸೂಕ್ಷ್ಮವಾಗಿ ಗಮನಿಸಿದರೆ ಹೆಬ್ಬಾವು ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬಹುದು. ನಿಮಗೆ 10 ಸೆಕೆಂಡ್ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಹೆಬ್ಬಾವು ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.