ಸದ್ಯ ವೈರಲ್ ಆಗಿರುವ ಫೋಟೋದಲ್ಲಿ ಹಸಿರು ಗಿಡಗಳು ಸೊಗಸಾಗಿ ಬೆಳೆದು ನಿಂತಿರುವ ದೃಶ್ಯವನ್ನು ಕಾಣಬಹುದು. ಅಲ್ಲಲ್ಲಿ ಮರಗಳಿವೆ ಮತ್ತು ಸುತ್ತಲೂ ಹಸಿರುವ ಗಿಡಗಳು ಹಬ್ಬಿವೆ. ಅವುಗಳ ಮಧ್ಯದಲ್ಲಿ ಒಂದು ಜಿಂಕೆ ಮೇಯುತ್ತಾ ನಿಂತಿದೆ. ಅದು ಎಲ್ಲಿದೆ ಎಂದು ಪತ್ತೆಹಚ್ಚಬೇಕು. ಆದರೆ, ಪತ್ತೆಹಚ್ಚೋದು ಅಷ್ಟು ಸುಲಭವಲ್ಲ. ಏಕೆಂದರೆ, ಜಿಂಕೆ ಅಷ್ಟು ಸುಲಭವಾಗಿ ನಮ್ಮ ಕಣ್ಣಿಗೆ ಕಾಣುವುದಿಲ್ಲ. ಇಲ್ಲಿ ಕೇವಲ ಕಣ್ಣಿಗೆ ಮಾತ್ರವಲ್ಲದೆ, ತಲೆಗೆ ಕೊಂಚ ಕೆಲಸ ಕೊಟ್ಟು ಸೂಕ್ಷ್ಮವಾಗಿ ಗಮನಿಸಿದರೆ ಜಿಂಕೆ ಎಲ್ಲಿದೆ ಎಂಬುದು ಗೊತ್ತಾಗುತ್ತದೆ. ನಿಮಗೆ 10 ಸೆಕೆಂಡ್ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಜಿಂಕೆಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.