

ನವದೆಹಲಿ: ದೇಶದಲ್ಲಿ ಸಶಸ್ತ್ರ ನಕ್ಸಲರನ್ನು ನಿರ್ಮೂಲನೆ ಮಾಡಲಾಗಿದ್ದರೂ, ದಿಮಾಗಿ ನಕ್ಸಲರು ಸಕ್ರಿಯರಾಗಿದ್ದು, ವಿವಿಧ ಸಂಘಟನೆಗಳಲ್ಲಿ ನಾಯಕತ್ವದ ಸ್ಥಾನಗಳನ್ನು ಅಲಂಕರಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಹೇಳಿದ್ದಾರೆ.
ಛತ್ತೀಸ್‌ಗಢದ ರಾಯಗಢದಲ್ಲಿ ನಡೆದ ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ 151ನೇ ಜಯಂತಿಯ ಜನಜಾತಿಯ ಗೌರವ ದಿವಸ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಪ್ರಧಾನಿ ಮೋದಿಯವರು ದೇಶದಿಂದ ನಕ್ಸಲಿಸಂ ಅನ್ನು ತೊಡೆದುಹಾಕಲು ಸಂಕಲ್ಪ ಮಾಡಿದ್ದರು. ಅದರಂತೆ ಕೇಂದ್ರ ಮತ್ತು ಛತ್ತೀಸ್‌ಗಢ ಸರ್ಕಾರ ಎರಡೂ ಆ ಬದ್ಧತೆಯನ್ನು ಪೂರೈಸಿವೆ ಎಂದಿದ್ದಾರೆ.
ಆದರೆ ದೇಶದದಲ್ಲಿ ಶಸ್ತ್ರ ನಕ್ಸಲರನ್ನು ನಿರ್ಮೂಲನೆ ಮಾಡಲಾಗಿದ್ದರೂ, ದಿಮಾಗಿ ನಕ್ಸಲರು ಸಕ್ರಿಯರಾಗಿದ್ದು, ವಿವಿಧ ಸಂಘಟನೆಗಳಲ್ಲಿ ನಾಯಕತ್ವದ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಸರ್ಕಾರ ತನ್ನ ಕೆಲಸದ ಮೂಲಕ ಅವರಿಗೆ ಪಾಠ ಕಲಿಸುತ್ತದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಕ್ರಾಂತಿಯ ಬಗ್ಗೆ ಮಾತನಾಡುವ ಸಂವಿಧಾನವನ್ನು ಪ್ರತಿಪಾದಿಸುವ, ಆದರೆ ಪ್ರಜಾಪ್ರಭುತ್ವದ ವಿರುದ್ಧ ಜನರನ್ನು ಪ್ರಚೋದಿಸುವವರ ವಿರುದ್ಧ ಜನರು ಎಚ್ಚರವಾಗಿರಬೇಕೆಂದು ಒತ್ತಾಯಿಸಿದರು. ಮತ್ತು ಕಾಂಗ್ರೆಸ್ ಬುಡಕಟ್ಟು ಸಮುದಾಯಗಳು ಮತ್ತು ಅವರ ಮತಗಳನ್ನು ರಾಜಕೀಯ ಉದ್ದೇಶಗಳಿಗಾಗಿ ಮಾತ್ರ ಬಳಸುತ್ತದೆ ಎಂದು ಟೀಕಿಸಿದ್ದಾರೆ.
ಬಿಜೆಪಿ ಅದಕ್ಕೆ ವ್ಯತಿರಿಕ್ತವಾಗಿ ಬುಡಕಟ್ಟು ಸಮುದಾಯಗಳನ್ನು ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುವ ಬದಲು ಜವಾಬ್ದಾರಿಯುತ ಸ್ಥಾನಗಳನ್ನು ವಹಿಸಿಕೊಡುವ ಮೂಲಕ ಅವರನ್ನು ಸಬಲೀಕರಣಗೊಳಿಸುವುದರಲ್ಲಿ ನಿರತವಾಗಿದೆ ಎಂದು ಪ್ರತಿಪಾದಿಸಿದ್ದಾರೆ (ಏಜೆನ್ಸೀಸ್).