ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸುಮಾರು 70 ಜನರನ್ನು ವಶಕ್ಕೆ ಪಡೆದಿದ್ದಾರೆ. ಆದರೆ, ವಶಕ್ಕೆ ಪಡೆದವರು ವಿದ್ಯಾರ್ಥಿಗಳಲ್ಲ ಎಂದು ಸ್ಪಷ್ಟಪಡಿಸಿರುವ ಪೊಲೀಸರು, ಅವರ ವೈಯಕ್ತಿಕ ವಿವರಗಳು ಮತ್ತು ಹಿನ್ನೆಲೆಯನ್ನು ಪರಿಶೀಲಿಸುತ್ತಿದ್ದಾರೆ. ಈ ಸಂಘರ್ಷದ ವೇಳೆ ಸುಮಾರು 15 ರಿಂದ 20 ಪೊಲೀಸ್ ವಾಹನಗಳಿಗೆ ಹಾನಿಯಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸುಮಾರು 70 ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಪ್ರತಿಭಟನೆಯಲ್ಲಿ ನಡೆದ ಗಲಭೆ, ಸಾರ್ವಜನಿಕ ನೌಕರರ ಮೇಲಿನ ಹಲ್ಲೆ, ಸಾರ್ವಜನಿಕ ಆಸ್ತಿಗೆ ಹಾನಿ ಮತ್ತು ಇತರ ಅಪರಾಧಗಳಿಗಾಗಿ ಭಾರತೀಯ ನ್ಯಾಯ ಸಂಹಿತೆ ಹಾಗೂ ಇತರ ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.