ಮದುವೆ ಸಂಭ್ರಮದ ನಡುವೆ ದುರಂತ: ಊಟ ಸವಿದ 400ಕ್ಕೂ ಹೆಚ್ಚು ಮಂದಿ ಅಸ್ವಸ್ಥ! Food Poisoning

Food Poisoning (ಚಿತ್ರ X)
Food Poisoning (ಚಿತ್ರ X)
Published on

ಪ್ರಮುಖ ಮುಖ್ಯಾಂಶಗಳು

  • ಮದುವೆ ಸಮಾರಂಭವೊಂದರಲ್ಲಿ ಊಟ ಸವಿದ ನಂತರ 400 ಕ್ಕೂ ಹೆಚ್ಚು ಜನರು ಅಸ್ವಸ್ಥ
  • ಅಬ್ಲೋಡ್ ಗ್ರಾಮದಲ್ಲಿ ನಡೆದ ಮದುವೆ ಔತಣಕೂಟದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು
  • ಭೋಜನ ಮುಗಿಸಿ ಮನೆಗೆ ತೆರಳಿದ ಕೆಲವೇ ಗಂಟೆಗಳಲ್ಲಿ ಅಥಿತಿಗಳಲ್ಲಿ ವಾಕರಿಕೆ, ವಾಂತಿ
ಅಹಮದಾಬಾದ್​: ಮದುವೆ ಸಮಾರಂಭವೊಂದರಲ್ಲಿ ಬಡಿಸಲಾದ ಆಹಾರ ವಿಷಪೂರಿತವಾದ ಪರಿಣಾಮ ಸುಮಾರು 400 ಕ್ಕೂ ಹೆಚ್ಚು ಅಥಿತಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ (Food Poisoning) ಘಟನೆ ಗುಜರಾತ್‌ನ ದಾಹೋದ್ ಜಿಲ್ಲೆಯ ಅಬ್ಲೋಡ್ ಗ್ರಾಮದಲ್ಲಿ ನಡೆದಿದೆ.

ಘಟನೆಯ ವಿವರ

ಅಬ್ಲೋಡ್ ಗ್ರಾಮದಲ್ಲಿ ನಡೆದ ಮದುವೆ ಔತಣಕೂಟದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ಭೋಜನ ಮುಗಿಸಿ ಮನೆಗೆ ತೆರಳಿದ ಕೆಲವೇ ಗಂಟೆಗಳಲ್ಲಿ ಅಥಿತಿಗಳಲ್ಲಿ ವಾಕರಿಕೆ, ವಾಂತಿ, ಹೊಟ್ಟೆ ನೋವನ್ನು ಅನುಭವಿಸಲು ಪ್ರಾರಂಭಿಸಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು.
ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು, ಮದುವೆಯಲ್ಲಿ ತಯಾರಿಸಲಾಗಿದ್ದ ಆಹಾರದ ಮಾದರಿಗಳನ್ನು ಸಂಗ್ರಹಿಸಿಕೊಂಡು ಪರೀಕ್ಷೆಗೆ ಕಳುಹಿಸಿದ್ದಾರೆ. ಆದಾಗ್ಯೂ, ಲ್ಯಾಬ್ ವರದಿ ಬಂದ ನಂತರವಷ್ಟೇ ನಿಖರ ಕಾರಣ ತಿಳಿಯಲಿದೆ ಎಂದು ಜಿಲ್ಲಾ ಮುಖ್ಯ ವೈದ್ಯಕೀಯ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಈ ಘಟನೆಗೂ ಮೊದಲು, ತೆಹ್ರಿ ಜಿಲ್ಲೆಯ ಬಾದ್‌ಶಾಹಿಥೌಲ್ ಪ್ರದೇಶದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಕಲುಷಿತ ಆಹಾರವನ್ನು ಸೇವಿಸಿದ ನಂತರ ಸುಮಾರು 36 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.

ಆಹಾರ ಸುರಕ್ಷತೆಯ ಬಗ್ಗೆ ಎಚ್ಚರಿಕೆ

ಬೇಸಿಗೆಯ ತಾಪಮಾನ ಹೆಚ್ಚುತ್ತಿರುವುದರಿಂದ ಆಹಾರ ಪದಾರ್ಥಗಳು ಬೇಗನೆ ಹಾಳಾಗುವ ಸಾಧ್ಯತೆ ಇರುತ್ತದೆ. ಇಂತಹ ಸಾಮೂಹಿಕ ಸಮಾರಂಭಗಳಲ್ಲಿ ಸ್ವಚ್ಛತೆ ಮತ್ತು ತಾಜಾ ಆಹಾರದ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಅತ್ಯಗತ್ಯ. ಈ ಘಟನೆಯು ಮದುವೆ ಮತ್ತು ಇತರೆ ಕಾರ್ಯಕ್ರಮಗಳಲ್ಲಿ ಕೇಟರಿಂಗ್ ಸೇವೆಗಳ ಗುಣಮಟ್ಟದ ಮೇಲೆ ದೊಡ್ಡ ಪ್ರಶ್ನೆಯನ್ನು ಎತ್ತಿದೆ (ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net