ಕೋಲ್ಕತ್ತಾ: ಇಡೀ ದೇಶದ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದ ಪಾಣಿಹಟಿ ವಿಧಾನಸಭಾ ಕ್ಷೇತ್ರದಲ್ಲಿ ಐತಿಹಾಸಿಕ ಬದಲಾವಣೆಯ ಗಾಳಿ ಬೀಸಿದೆ. ಆರ್.ಜಿ ಕರ್ ವೈದ್ಯಕೀಯ ಕಾಲೇಜಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತ ವೈದ್ಯೆಯ ತಾಯಿ, ಬಿಜೆಪಿ ಅಭ್ಯರ್ಥಿ ರತ್ನಾ ದೆಬ್‌ನಾಥ್ ಅವರು ಭರ್ಜರಿ ಜಯದತ್ತ ಮುನ್ನುಗ್ಗುತ್ತಿದ್ದಾರೆ. ಆರಂಭಿಕ ಸುತ್ತಿನಿಂದಲೇ ಮುನ್ನಡೆ ಸಾಧಿಸಿರುವ ಅವರು, "ಬಂಗಾಳದಲ್ಲಿ ಕಮಲ ಅರಳಲಿದೆ" ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.