ಪೋಷಕರು ನಾವು ಮಗನ ಒಳ್ಳೆಯದಕ್ಕಾಗಿಯೇ ಹೀಗೆ ಮಾಡಿದ್ದೇವೆ ಎಂದು ವಾದಿಸಿದರೂ, ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಬಾಲಾಪರಾಧ ನ್ಯಾಯ ಕಾಯ್ದೆಯಡಿ (Juvenile Justice Act) ಪೋಷಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸದ್ಯ ಬಾಲಕನನ್ನು ಮಕ್ಕಳ ರಕ್ಷಣಾ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಆತನಿಗೆ ಕೌನ್ಸೆಲಿಂಗ್ ನೀಡಲಾಗುತ್ತಿದೆ.