ಸದನದಲ್ಲಿ ದಾಖಲೆಗಳನ್ನು ಮಂಡಿಸಿದ ನಂತರ, ವಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವನ್ನು ಪ್ರಸ್ತಾಪಿಸಿದರು. ಸಾವಿರಾರು ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಅವರ ಮೇಲೆ ಲಾಠಿ ಪ್ರಹಾರ ನಡೆಸಲಾಗಿದೆ. ಸರ್ಕಾರವು ವಿದ್ಯಾರ್ಥಿಗಳನ್ನು ಹತ್ತಿಕ್ಕಲು ಮತ್ತು ಈ ಪ್ರಮುಖ ವಿಷಯವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ವಿರೋಧ ಪಕ್ಷದ ಸದಸ್ಯರು ಎದ್ದು ನಿಂತು ಸರ್ಕಾರದ ವಿರುದ್ಧ "ಶೇಮ್, ಶೇಮ್" ಎಂದು ಘೋಷಣೆ ಕೂಗ ತೊಡಗಿದರು. ತೀವ್ರ ಕೋಲಾಹಲ ಉಂಟಾದ ಹಿನ್ನೆಲೆಯಲ್ಲಿ, ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಅವರು ರಾಜ್ಯಸಭೆಯ ಕಲಾಪವನ್ನು ಮುಂದೂಡಿದರು, (ಏಜೆನ್ಸೀಸ್).