ಕಳೆದ ಬಜೆಟ್ ಅಧಿವೇಶನದಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಪಾಸ್ ಮಾಡಲು ಸಾಧ್ಯವಾಗದ ಕಾರಣ ಕೇಂದ್ರ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿತ್ತು. ಹೀಗಾಗಿ, ಮೋದಿ ಸರ್ಕಾರ ಈ ಮುಂಗಾರು ಅಧಿವೇಶನದಲ್ಲೇ ಆ ಪ್ರತಿಷ್ಠಿತ ಮಸೂದೆಯನ್ನು ಮತ್ತೊಮ್ಮೆ ಸದನದ ಮುಂದೆ ತರಲು ತೆರೆಮರೆಯಲ್ಲಿ ಸಿದ್ಧತೆ ನಡೆಸುತ್ತಿದೆ ಎನ್ನಲಾಗುತ್ತಿದೆಯಾದರೂ, ಈ ಬಗ್ಗೆ ಸರ್ಕಾರದಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಂದಿಲ್ಲ.