

ಮುಂಬೈ: ಶಿವಸೇನಾ ಕಾರ್ಪೊರೇಟರ್ ಮಹಿಳಾ ವೈದ್ಯೆಯ ಮೇಲೆ ಹಲ್ಲೆ ನಡೆಸಿದ್ದ ಭೀಕರ ಘಟನೆ ಮಾಸುವ ಮುನ್ನವೇ ಮಹಾರಾಷ್ಟ್ರದಲ್ಲಿ ಮತ್ತೊಬ್ಬ ವೈದ್ಯರ ಮೇಲೆ ಹಲ್ಲೆ ನಡೆದಿದೆ. ಕಲ್ಯಾಣ್‌ನ ಖಾಸಗಿ ಆಸ್ಪತ್ರೆಯಲ್ಲಿ ರೋಗಿಯ ಮಗನೊಬ್ಬ ಎಲುಬು ಮತ್ತು ಕೀಲು ತಜ್ಞ ಡಾ. ಯೋಗೇಂದ್ರ ಜೈಸ್ವಾಲ್ ಅವರಿಗೆ ಏಕವಚನದಲ್ಲಿ ನಿಂದಿಸಿ, ಕಪಾಳಮೋಕ್ಷ
(Doctor Assaulted)
ಮಾಡಿದ್ದಾನೆ. ಆದಾಗ್ಯೂ, ಈ ಕೃತ್ಯದಿಂದ ಆಕ್ರೋಶಗೊಂಡಿರುವ ವೈದ್ಯಕೀಯ ಸಮುದಾಯ, ಆಸ್ಪತ್ರೆಗಳಿಗೆ ಸೂಕ್ತ ಭದ್ರತೆ ನೀಡುವಂತೆ ಸರ್ಕಾರಕ್ಕೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ಮಹಾರಾಷ್ಟ್ರದಲ್ಲಿ ಹೆಚ್ಚಿದ ಆತಂಕ