ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅವಿಭಾಜ್ಯ ಧಾರ್ಮಿಕ ಆಚರಣೆ ಎಂಬುದನ್ನು ಸಾಬೀತುಪಡಿಸುವ ಅಗತ್ಯ ದಾಖಲೆಯನ್ನು ಅರ್ಜಿದಾರರು ಸಲ್ಲಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ. ಶಾಲೆಯ ವಿವಿಧ ತರಗತಿಗಳ ಫೋಟೋಗಳನ್ನು ಪರಿಶೀಲಿಸಿದಾಗ, ಅರ್ಜಿದಾರಳನ್ನು ಹೊರತುಪಡಿಸಿ ಅದೇ ಧಾರ್ಮಿಕ ಸಮುದಾಯಕ್ಕೆ ಸೇರಿದ ಇತರೆ ಯಾವುದೇ ವಿದ್ಯಾರ್ಥಿನಿಯರು, ಹಿಜಾಬ್ ಧರಿಸಿರುವುದು ಕಂಡುಬಂದಿಲ್ಲ ಎಂದು ಕೋರ್ಟ್ ತೀರ್ಪಿನಲ್ಲಿ ಉಲ್ಲೇಖಿಸಿದೆ.