ರಸ್ತೆ ಬದಿಯ ಕಂದಕಕ್ಕೆ ಬಿದ್ದ ಅಂತ್ಯಕ್ರಿಯೆಗೆ ಹೋಗಿ ಬರ್ತಿದ್ದ ಪಿಕಪ್​ ವಾಹನ; ಎಂಟು ಮಂದಿ ಸಾವು, ಇಬ್ಬರಿಗೆ ಗಂಭೀರ ಗಾಯ | Eight killed

ಘಟನೆಯ ಸ್ಥಳ
ಘಟನೆಯ ಸ್ಥಳ
Published on
ಡೆಹ್ರಾಡೂನ್: ಉತ್ತರಾಖಂಡದ ತೆಹ್ರಿ ಜಿಲ್ಲೆಯ ಚಂಬಾ ಪ್ರದೇಶದಲ್ಲಿ ಗುರುವಾರ(ಏ. 23) ಯುಟಿಲಿಟಿ ಪಿಕಪ್ ವಾಹನವೊಂದು ರಸ್ತೆ ಬದಿಯ ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ ಎಂಟು ಮಂದಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ತೆಹ್ರಿ ಜಿಲ್ಲಾಧಿಕಾರಿ ನಿತಿಕಾ ಖಂಡೇಲ್ವಾಲ್, ಹರಿದ್ವಾರದಲ್ಲಿ ಗ್ರಾಮಸ್ಥರೊಬ್ಬರ ಅಂತ್ಯಕ್ರಿಯೆ ಮುಗಿಸಿ ಮನೆಗೆ ವಾಪಾಸ ಹಿಂತಿರುಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ಕಂದಕಕ್ಕೆ ಬಿದ್ದಿದೆ. ವಾಹಾನದಲ್ಲಿ ಘನ್ಸಾಲಿಯ ಥಿಯೋಲ್ಧರ್ ಗ್ರಾಮದ 10 ಮಂದಿ ಇದ್ದರು. ಅದರಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಅಪಘಾತದ ಮಾಹಿತಿ ತಿಳಿದ ತಕ್ಷಣ ತುರ್ತು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿವೆ. ಎಂಟು ಶವಗಳನ್ನು ಹೊರತೆಗೆದಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.
ಘಟನೆಯ ಬಗ್ಗೆ ಉತ್ತರಾಖಂಡ್ ಸಿಎಂ ಪುಷ್ಕರ್ ಸಿಂಗ್ ಧಾಮಿ ದುಃಖ ವ್ಯಕ್ತಪಡಿಸಿದ್ದು, ದೇವರು ಅಗಲಿದ ಆತ್ಮಗಳಿಗೆ ತನ್ನ ಪಾದದಲ್ಲಿ ಸ್ಥಾನ ನೀಡಲಿ, ಮತ್ತು ಮೃತರನ್ನು ಕಳೆದುಕೊಂಡು ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದು, ಗಾಯಾಳುಗಳಿಗೆ ತ್ವರಿತ ಮತ್ತು ಸರಿಯಾದ ಚಿಕಿತ್ಸೆ ಒದಗಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net