ಭಾನುವಾರ ಪಿಂಪ್ರಿ-ಚಿಂಚ್ವಾಡ್ನಲ್ಲಿ ನಡೆದ ಚುನಾವಣಾ ಪ್ರಚಾರ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಅಜಿತ್ ಪವಾರ್, ಪುರಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವಾಗ ಎರಡೂ ಬಣಗಳು ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸಲಾಗಿದೆ. ಇದು ಕುಟುಂಬವನ್ನು ಮತ್ತೆ ಒಟ್ಟಿಗೆ ತಂದಿದೆ. ಫಲಿತಾಂಶದ ಬಗ್ಗೆ ಯಾವುದೇ ಪ್ರಶ್ನೆ ಇಲ್ಲ. ಆದರೆ ಕೆಲವೊಮ್ಮೆ ಮಹಾರಾಷ್ಟ್ರದ ಅಭಿವೃದ್ಧಿಯ ಹಿತದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಸ್ಥಳೀಯ ನಾಯಕರೊಂದಿಗೆ ಸೀಟು ಹಂಚಿಕೆಯ ಬಗ್ಗೆಯೂ ನಾನು ಚರ್ಚಿಸಿದ್ದೇನೆ, ಅದನ್ನು ಶೀಘ್ರದಲ್ಲೇ ಘೋಷಿಸಲಾಗುವುದು. ಗಡಿಯಾರ ಮತ್ತು ತುಟಾರಿ ಒಂದಾಗಿ ಎಂದು ಹೇಳಿದ್ದಾರೆ.