ಹೈಕೋರ್ಟ್ ಮೇಲ್ವಿಚಾರಣೆಯಲ್ಲಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆಯಲ್ಲಿ ಸಿಎಂಒ ಹಸ್ತಕ್ಷೇಪ ಮಾಡಿದೆ ಎಂಬ ಕಾಂಗ್ರೆಸ್ನ ಆರೋಪಗಳನ್ನು ತಿರಸ್ಕರಿಸಿದ ವಿಜಯನ್, ವಿಪಕ್ಷಗಳು ಮುಖ್ಯಮಂತ್ರಿ ಕಚೇರಿ ವಿರುದ್ಧ ಆರೋಪ ಮಾಡುವ ಬದಲು, ನನ್ನ ಈ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದರು. ತನಿಖೆ ಸರಿಯಾಗಿ ನಡೆಯುತ್ತಿದ್ದು, ಇದಕ್ಕೆ ಸಂಬಂಧಪಟ್ಟಂತೆ ಯಾವುದೇ ದೂರು ಬಂದಿಲ್ಲ, ಈ ವಿಷಯದಲ್ಲಿ ನಾನಾಗಲಿ, ನನ್ನ ಕಚೇರಿಯಾಗಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.