ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ರಾಹುಲ್ ಗಾಂಧಿ, ಪರೀಕ್ಷೆ ನಡೆಯುವುದಕ್ಕೆ ಎರಡು ದಿನಗಳ ಮುಂಚೆಯೇ ನೀಟ್ ಪ್ರಶ್ನೆಪತ್ರಿಕೆ ವಾಟ್ಸಾಪ್‌ನಲ್ಲಿ ಸೋರಿಕೆಯಾಗಿತ್ತು ಎಂಬುದು ಇಡೀ ದೇಶಕ್ಕೆ ಗೊತ್ತು. ಆದರೆ, ಈ ಇಡೀ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನಕ್ಕೆ ಶರಣಾಗಿದ್ದಾರೆ. ದೇಶದ ಶಿಕ್ಷಣ ವ್ಯವಸ್ಥೆಯ ಆಧಾರಸ್ತಂಭವನ್ನೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಧ್ವಂಸಗೊಳಿಸಿದ್ದಾರೆ. 22 ಲಕ್ಷ ಯುವಕರಿಗೆ ಕೇಂದ್ರ ಸರ್ಕಾರ ದ್ರೋಹ ಎಸಗಿದೆ ಎಂದು ಆರೋಪಿಸಿದ್ದಾರೆ.