ಆಪ್ತ ಗೆಳೆಯ ಪುಟಿನ್ಗೆ ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿದ ಪ್ರಧಾನಿ ಮೋದಿ | Bhagavad Gita
ಆಪ್ತ ಗೆಳೆಯ ಪುಟಿನ್ಗೆ ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿದ ಪ್ರಧಾನಿ ಮೋದಿ
Published on:
Copied
Follow Us
ನವದೆಹಲಿ: ಎರಡು ದಿನಗಳ ಕಾಲ ಭಾರತ ಭೇಟಿಯಲ್ಲಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯನ್ ಭಾಷೆಯಲ್ಲಿನ ಭಗವದ್ಗೀತೆಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.
"X" ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ "ಅಧ್ಯಕ್ಷ ಪುಟಿನ್ ಅವರಿಗೆ ರಷ್ಯನ್ ಭಾಷೆಯಲ್ಲಿ ಗೀತೆಯ ಪ್ರತಿಯನ್ನು ನೀಡಲಾಯಿತು. ಗೀತೆಯ ಬೋಧನೆಗಳು ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತವೆ" ಎಂದು ಹೇಳಿದರು.
ಗುರುವಾರ ಸಂಜೆ ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರು ರಷ್ಯಾ ಅಧ್ಯಕ್ಷರನ್ನು ಆತ್ಮೀಯವಾಗಿ ಸ್ವಾಗತಿಸಿದರು. ನನ್ನ ಸ್ನೇಹಿತ ಅಧ್ಯಕ್ಷ ಪುಟಿನ್ ಅವರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ. ಇಂದು ಸಂಜೆ ಮತ್ತು ನಾಳೆ ನಮ್ಮ ಮಾತುಕತೆಗಳನ್ನು ಎದುರು ನೋಡುತ್ತಿದ್ದೇನೆ. ಭಾರತ-ರಷ್ಯಾ ಸ್ನೇಹವು ಕಾಲಾತೀತವಾಗಿದ್ದು, ಇದು ನಮ್ಮ ಜನರಿಗೆ ಹೆಚ್ಚಿನ ಪ್ರಯೋಜನವನ್ನು ನೀಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆ
ನಾಲ್ಕು ವರ್ಷಗಳಲ್ಲಿ ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡುತ್ತಿರುವ ಪುಟಿನ್ ಡಿಸೆಂಬರ್ 5 ರವರೆಗೆ ನವದೆಹಲಿಯಲ್ಲಿ ಇರುತ್ತಾರೆ. ತಮ್ಮ ಭೇಟಿಯ ಸಮಯದಲ್ಲಿ, ರಷ್ಯಾದ ಅಧ್ಯಕ್ಷರು ಪ್ರಧಾನಿ ಮೋದಿಯವರೊಂದಿಗೆ 23 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯನ್ನು ಸಹ ನಡೆಸಲಿದ್ದಾರೆ.
ರಕ್ಷಣಾ, ವ್ಯಾಪಾರ, ವಿಜ್ಞಾನ ಮತ್ತು ತಂತ್ರಜ್ಞಾನ, ಸಂಸ್ಕೃತಿ ಮತ್ತು ಮಾನವೀಯ ವ್ಯವಹಾರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ನಿರೀಕ್ಷೆಯಿರುವ ಪುಟಿನ್ ಅವರ ಪ್ರವಾಸದ ಮಹತ್ವದ ಬಗ್ಗೆ ತಜ್ಞರು ಕೂಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ,(ಏಜೆನ್ಸೀಸ್).