ಮಧ್ಯಪ್ರಾಚ್ಯದಲ್ಲಿ ಕ್ಷಿಪಣಿಗಳು ಅಪ್ಪಳಿಸುತ್ತಿದ್ದರೂ ಭಾರತೀಯರಿಗಿಲ್ಲ ಆತಂಕ; ಗಲ್ಫ್ ದಿಗ್ಗಜರ ಜೊತೆ ಮೋದಿ ಹೈ-ಲೆವೆಲ್ ಗೇಮ್‌ ಪ್ಲಾನ್! | PM Modi Diplomacy

PM Modi Diplomacy | ಗಲ್ಫ್ ದಿಗ್ಗಜರ ಜೊತೆ ಮೋದಿ ಹೈ-ಲೆವೆಲ್ ಗೇಮ್‌ ಪ್ಲಾನ್ (ಸಂಗ್ರಹ ಚಿತ್ರ)
PM Modi Diplomacy | ಗಲ್ಫ್ ದಿಗ್ಗಜರ ಜೊತೆ ಮೋದಿ ಹೈ-ಲೆವೆಲ್ ಗೇಮ್‌ ಪ್ಲಾನ್ (ಸಂಗ್ರಹ ಚಿತ್ರ)
Published on
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಜಗತ್ತನ್ನು ಮೂರನೇ ಮಹಾಯುದ್ಧದ ಅಂಚಿಗೆ ತಂದು ನಿಲ್ಲಿಸಿದ್ದು, ಈ ಸಂಘರ್ಷದ ನಡುವೆ ವಿದೇಶಗಳಲ್ಲಿ ನೆಲೆಸಿರುವ ಲಕ್ಷಾಂತರ ಭಾರತೀಯರ ಜೀವ ರಕ್ಷಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ರಾಜತಾಂತ್ರಿಕ (PM Modi Diplomacy) ಸಂವಹನವನ್ನು ಚುರುಕುಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಒಮಾನ್ ಸುಲ್ತಾನ್ ಹೈತಮ್ ಬಿನ್ ತಾರಿಕ್ ಮತ್ತು ಕುವೈತ್‌ನ ಕ್ರೌನ್ ಪ್ರಿನ್ಸ್ ಶೇಖ್ ಸಬಾಹ್ ಅಲ್-ಖಾಲಿದ್​​ರೊಂದಿಗೆ ಮಾತನಾಡಿರುವ ಪ್ರಧಾನಿ ಮೋದಿ, ಆ ದೇಶಗಳಲ್ಲಿ ವಾಸಿಸುತ್ತಿರುವ ಭಾರತೀಯ ಸಮುದಾಯದ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಗಲ್ಫ್ ರಾಷ್ಟ್ರಗಳಲ್ಲಿನ ಭಾರತೀಯರ ಕ್ಷೇಮ ಮತ್ತು ಭದ್ರತೆಯನ್ನು ಕಾಪಾಡುವಂತೆ ಮೋದಿ ಮನವಿ ಮಾಡಿದ್ದು, ಅದಕ್ಕೆ ಪೂರಕವೆಂಬಂತೆ ಆಯಾ ದೇಶಗಳ ನಾಯಕರು ಭಾರತಕ್ಕೆ ಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಸೋಮವಾರದಂದು ಸಹ ಪ್ರಧಾನಿ ಮೋದಿ ಮಧ್ಯಪ್ರಾಚ್ಯದ ಪ್ರಮುಖ ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿದ್ದು, ದೊರೆ ಅಬ್ದುಲ್ಲಾ II ರೊಂದಿಗಿನ ಸಂಭಾಷಣೆಯಲ್ಲಿ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಬಗ್ಗೆ ಭಾರತದ ಕಳವಳವನ್ನು ವ್ಯಕ್ತಪಡಿಸಿದರು. ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಗೆ ಭಾರತದ ಬೆಂಬಲವನ್ನು ಅವರು ಪುನರುಚ್ಚರಿಸಿದರು ಮತ್ತು ಜೋರ್ಡಾನ್‌ನಲ್ಲಿರುವ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸಿದ್ದಕ್ಕಾಗಿ ರಾಜನಿಗೆ ಧನ್ಯವಾದಗಳನ್ನು ಅರ್ಪಿಸಿದರು.
ಪ್ರಧಾನಿ ಮೋದಿ ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಮತ್ತು ಬಹ್ರೇನ್ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರೊಂದಿಗೂ ಸಹ ಮಾತನಾಡಿದ್ದು, ಎರಡೂ ದೇಶಗಳ ಮೇಲೆ ಇರಾನ್ ಇತ್ತೀಚೆಗೆ ನಡೆಸಿದ ದಾಳಿಗಳನ್ನು ಖಂಡಿಸಿದರು. ನಡೆಯುತ್ತಿರುವ ಹಗೆತನದ ನಡುವೆಯೂ ಈ ದೇಶಗಳಲ್ಲಿ ಭಾರತೀಯ ವಲಸಿಗರನ್ನು ರಕ್ಷಿಸುವ ಕ್ರಮಗಳ ಮೋದಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ಅಮೆರಿಕ ಮತ್ತು ಇಸ್ರೇಲ್ ಇರಾನ್ ಒಳಗೆ ದೊಡ್ಡ ಪ್ರಮಾಣದ ಮಿಲಿಟರಿ ದಾಳಿಗಳನ್ನು ನಡೆಸಿದ ನಂತರ ಭಾನುವಾರ ಮಧ್ಯಪ್ರಾಚ್ಯದಾದ್ಯಂತ ಉದ್ವಿಗ್ನತೆ ತೀವ್ರವಾಗಿ ಹೆಚ್ಚಾಯಿತು. ಈ ದಾಳಿಗಳು ಬ್ಯಾಲಿಸ್ಟಿಕ್ ಕ್ಷಿಪಣಿ ನೆಲೆಗಳು ಮತ್ತು ನೌಕಾ ಹಡಗುಗಳ ಮೇಲೆ ಕೇಂದ್ರೀಕರಿಸಿದ್ದು, ಇತ್ತೀಚಿನ ವರ್ಷಗಳಲ್ಲಿ ಈ ಪ್ರದೇಶದ ಅತ್ಯಂತ ತೀವ್ರವಾದ ಮುಖಾಮುಖಿಗಳಲ್ಲಿ ಒಂದಾಗಿದೆ.
ಇರಾನ್‌ನ ಹಲವಾರು ಪ್ರದೇಶಗಳಲ್ಲಿ ಭಾರಿ ಸ್ಫೋಟಗಳು ಸಂಭವಿಸಿದ ವರದಿಯಾಗಿದ್ದು, ಟೆಹ್ರಾನ್‌ನಲ್ಲಿ ಕಟ್ಟಡಗಳು ನಡುಗಿದವು, ದಟ್ಟವಾದ ಹೊಗೆ ಆಕಾಶದೆತ್ತರಕ್ಕೆ ವ್ಯಾಪಿಸಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಅಶಾಂತಿ ಪ್ರಾರಂಭವಾದಾಗಿನಿಂದ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಮತ್ತು ಹಲವಾರು ಹಿರಿಯ ರಾಜಕೀಯ ಮತ್ತು ಮಿಲಿಟರಿ ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಎಂದು ಇರಾನಿನ ಅಧಿಕಾರಿಗಳು ದೃಢಪಡಿಸಿದ್ದಾರೆ(ಏಜೆನ್ಸೀಸ್​​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net