ಡೊನಾಲ್ಡ್ ಟ್ರಂಪ್ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಪ್ರಧಾನಿ ಮೋದಿ: ವ್ಯಾಪಾರ, ರಕ್ಷಣೆ, ಇಂಧನ ಕುರಿತು ಚರ್ಚೆ | PM Modi

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ(ಸೆ. 30) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಇಬ್ಬರೂ ವ್ಯಾಪಾರ, ರಕ್ಷಣೆ, ಇಂಧನ, ನಿರ್ಣಾಯಕ ತಂತ್ರಜ್ಞಾನ ಮತ್ತು ಇತರ ಕ್ಷೇತ್ರಗಳಲ್ಲಿನ ದ್ವಿಪಕ್ಷೀಯ ಸಹಕಾರದ ಕುರಿತು ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.
ಡೊನಾಲ್ಡ್ ಟ್ರಂಪ್ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಪ್ರಧಾನಿ ಮೋದಿ: ವ್ಯಾಪಾರ, ರಕ್ಷಣೆ, ಇಂಧನ ಕುರಿತು ಚರ್ಚೆ | PM Modi
Published on: 

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ(ಸೆ. 30) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಇಬ್ಬರೂ ವ್ಯಾಪಾರ, ರಕ್ಷಣೆ, ಇಂಧನ, ನಿರ್ಣಾಯಕ ತಂತ್ರಜ್ಞಾನ ಮತ್ತು ಇತರ ಕ್ಷೇತ್ರಗಳಲ್ಲಿನ ದ್ವಿಪಕ್ಷೀಯ ಸಹಕಾರದ ಕುರಿತು ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಎಕ್ಸ್​ನಲ್ಲಿ ಮಾಹಿತಿ ನೀಡಿರುವ ಪ್ರಧಾನಿ ಮೋದಿ, ಅಧ್ಯಕ್ಷ ಟ್ರಂಪ್ ಅವರೊಂದಿಗೆ ಫಲಪ್ರದ ಮಾತುಕತೆ ನಡೆಸಿದೆ. ವ್ಯಾಪಾರ, ರಕ್ಷಣೆ, ಇಂಧನ, ಪ್ರಮುಖ ತಂತ್ರಜ್ಞಾನಗಳು ಮತ್ತು ಇತರ ಕ್ಷೇತ್ರಗಳಲ್ಲಿನ ನಮ್ಮ ದ್ವಿಪಕ್ಷೀಯ ಸಹಕಾರವನ್ನು ನಾವು ಪರಿಶೀಲಿಸಿದೆವು. ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುನ್ನಡೆಸಲು ನಿಕಟ ನಮ್ಮ ಸಂಪರ್ಕ ಕಾಯ್ದುಕೊಳ್ಳಲು ಪರಸ್ಪರ ಒಪ್ಪಿಕೊಂಡೆವು ಎಂದು ತಿಳಿಸಿದ್ದಾರೆ.

ಮುಂದುವರೆದು, ಜಾಗತಿಕ ಶಾಂತಿ ಮತ್ತು ಭದ್ರತೆಯನ್ನು ಮುನ್ನಡೆಸಲು ನಡೆಯುತ್ತಿರುವ ಪ್ರಯತ್ನಗಳು ಸೇರಿದಂತೆ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳ ಕುರಿತು ನಾವು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

Also Read
ವಿಮಲ್ ಜಾಹೀರಾತು ಪ್ರಕರಣ; ಎಫ್​ಡಿಎ ನೋಟಿಸ್​ಗೆ ಉತ್ತರಿಸಿದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್‌: ತುಕರಾಮ್ ಮುಂಡೆ ಏನಂದ್ರು? | Tukaram Mundhe
ಡೊನಾಲ್ಡ್ ಟ್ರಂಪ್ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಪ್ರಧಾನಿ ಮೋದಿ: ವ್ಯಾಪಾರ, ರಕ್ಷಣೆ, ಇಂಧನ ಕುರಿತು ಚರ್ಚೆ | PM Modi

ಭಾರತ-ಅಮೆರಿಕ ನಡುವಿನ ಸಂಬಂಧಗಳಲ್ಲಿ ಮಹತ್ವದ ಘಟ್ಟದ ವೇಳೆ ಈ ಕರೆ ಮಾತುಕತೆ ನಡೆದಿದೆ. ವ್ಯಾಪಾರ ಮಾತುಕತೆಗಳು, ಇಂಧನ ಭದ್ರತೆ ಮತ್ತು ಕಾರ್ಯತಂತ್ರದ ತಂತ್ರಜ್ಞಾನಗಳಲ್ಲಿನ ಸಹಕಾರ ಇವೆಲ್ಲವೂ ದ್ವಿಪಕ್ಷೀಯ ಮಾತುಕತೆಯಲ್ಲಿ ಪ್ರಮುಖವಾಗಿ ಕೇಂದ್ರ ಬಿಂದುವಾಗಿವೆ.

ಇನ್ನೂ ಭಾರತ ಮತ್ತು ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಸುತ್ತಿವೆ. ಹೆಚ್ಚಿನ ಚರ್ಚೆಗಾಗಿ ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 29ರಿಂದ ಅಕ್ಟೋಬರ್ 5 ರವರೆಗೆ ಅಮೆರಿಕದಲ್ಲಿ ಮಾತುಕತೆ ನಡೆಸುತ್ತಿದ್ದಾರೆ (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net