ಹೊಸೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆಯನ್ನು ರಕ್ಷಣಾ ಸಚಿವಾಲಯ ತಿರಸ್ಕರಿಸಿದೆ ಎಂಬ ವರದಿಗಳನ್ನು ತಿರಸ್ಕರಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ, ಎಲ್ಲಿಯೂ ಅನುಮತಿ ನಿರಾಕರಿಸಲಾಗಿಲ್ಲ. ಕೆಲವು ಸ್ಪಷ್ಟೀಕರಣಗಳನ್ನು ಮಾತ್ರ ಕೇಳಿದ್ದು, ಅದಕ್ಕೆ ನಿರಾಕರಣೆ ಎಂಬ ಹಣೆಪಟ್ಟಿ ಕಟ್ಟುವುದು ಸರಿಯಲ್ಲ ಎಂದು ಹೇಳಿದರು. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಈ ವರ್ಷದ ಮಾರ್ಚ್ ಅಥವಾ ಏಪ್ರಿಲ್ನಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಗಳ ಜೊತೆಗೆ ಚುನಾವಣೆಗಳು ನಡೆಯುವ ಸಾಧ್ಯತೆ ಇದೆ(ಏಜೆನ್ಸೀಸ್).