ಗುಜರಾತ್ನಲ್ಲಿ ಏಕತಾ ಪ್ರತಿಮೆಯನ್ನು ವಿನ್ಯಾಸಗೊಳಿಸಿದ್ದ ಶಿಲ್ಪಿ ರಾಮ್ ಸುತಾರ್ ಅವರೇ ಇಲ್ಲಿನ ಶ್ರೀ ರಾಮನ ಪ್ರತಿಮೆಯನ್ನು ನಿರ್ಮಿಸಿದ್ದಾರೆ ಎಂದು ಗೋವಾ ಲೋಕೋಪಯೋಗಿ ಸಚಿವ ದಿಗಂಬರ ಕಾಮತ್ ಹೇಳಿದ್ದು. ಇದು ವಿಶ್ವದಲ್ಲೇ ಅತಿ ಎತ್ತರದ ಶ್ರೀ ರಾಮನ ಪ್ರತಿಮೆಯಾಗಲಿದೆ ಎಂದರು. ಸಾರ್ವಜನಿಕ ಸಭೆಗೂ ಮುನ್ನ ಪ್ರಧಾನಿ ಮೋದಿ ಮಠದಲ್ಲಿರುವ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಡೆಂಪೊ ತಿಳಿಸಿದ್ದು, ಗೋವಾ ರಾಜ್ಯಪಾಲ ಅಶೋಕ್ ಗಜಪತಿ ರಾಜು, ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಕೇಂದ್ರ ಸಚಿವ ಶ್ರೀಪಾದ ನಾಯಕ್, ರಾಜ್ಯ ಸಂಪುಟ ಸಚಿವರು ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ಹೇಳಿದರು.