ಇಂಧನ ಉಳಿತಾಯ ಮತ್ತು ವಿದೇಶಿ ವಿನಿಮಯದ ರಕ್ಷಣೆಗೆ ಒತ್ತು ನೀಡಿದ ಪ್ರಧಾನಿ ಮೋದಿಯವರು, ದೇಶದ ಜನತೆಗೆ ಮಹತ್ವದ ಕರೆ ನೀಡಿದ್ದಾರೆ. ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ಮಾಡುವುದು (Work from home), ಆನ್‌ಲೈನ್ ಸಭೆಗಳನ್ನು ನಡೆಸುವುದು, ಎಲೆಕ್ಟ್ರಿಕ್ ವಾಹನಗಳ ಬಳಕೆ, ಕಾರುಗಳ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಮೆಟ್ರೋದಂತಹ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳನ್ನು ಬಳಸುವಂತೆ ಅವರು ಸಲಹೆ ನೀಡಿದರು.