ರಾಷ್ಟ್ರದ ಭವ್ಯ ಭವಿಷ್ಯಕ್ಕೆ ವಿಕಸಿತ ಭಾರತವೇ ಮುನ್ನುಡಿ..ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ | 77th Republic Day

Narendra Modi | ಪ್ರಧಾನಿ ನರೇಂದ್ರ ಮೋದಿ
Narendra Modi | ಪ್ರಧಾನಿ ನರೇಂದ್ರ ಮೋದಿ
Published on
ದೆಹಲಿ: 77 ನೇ ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯಗಳನ್ನು ಕೋರಿದ್ದು, ರಾಷ್ಟ್ರಕ್ಕೆ ಗಣರಾಜ್ಯೋತ್ಸವದ ಶುಭಾಶಯಗಳು ತಿಳಿಸುತ್ತಾ, ಈ ಸಂದರ್ಭವು ವಿಕಸಿತ ಭಾರತವನ್ನು ನಿರ್ಮಿಸುವ ನಮ್ಮ ಸಾಮೂಹಿಕ ಸಂಕಲ್ಪದಲ್ಲಿ ನವೀಕೃತ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ ಎಂದು ಆಶಿಸಿದರು.
ಇಂದು 77 ನೇ ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ನವದೆಹಲಿಯ ಕರ್ತವ್ಯ ಪಥದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ, ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಮಾರಂಭದ ಉದ್ಘಾಟನೆ

ಸೋಮವಾರ ಬೆಳಿಗ್ಗೆ 10:30 ಕ್ಕೆ ಪ್ರಾರಂಭವಾಗುವ ಈ ಕಾರ್ಯಕ್ರಮ ಸುಮಾರು 90 ನಿಮಿಷಗಳ ಕಾಲ ನಡೆಯಲಿದ್ದು, ಪ್ರಧಾನಿ ಮೋದಿ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಪುಷ್ಪಗುಚ್ಛ ಇಡುವ ಮೂಲಕ, ಹುತಾತ್ಮ ವೀರರನ್ನು ಗೌರವಿಸಿದ ಬಳಿಕ ವೇದಿಕೆಯಲ್ಲಿ ಆಸೀನರಾಗಲಿದ್ದಾರೆ. ಇದಾದ ನಂತರ ಧ್ವಜಾರೋಹಣ, ರಾಷ್ಟ್ರಗೀತೆ ಮತ್ತು 172 ಫೀಲ್ಡ್ ರೆಜಿಮೆಂಟ್‌ನ 105 ಎಂಎಂ ಬಂದೂಕುಗಳಿಂದ 21-ಗನ್ ಸೆಲ್ಯೂಟ್ ಮಾಡಲಾಗುತ್ತದೆ.

ಗೃಹ ಸಚಿವ ಅಮಿತ್​​ ಷಾ ಶುಭಾಶಯ

ಕೇಂದ್ರ ಗೃಹ ಸಚಿವ ಅಮಿತ್ ಷಾ ಕೂಡ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಸಿದ್ದು, ಭಾರತದ ಬಲವಾದ ಪ್ರಜಾಪ್ರಭುತ್ವ ಚೌಕಟ್ಟಿನ ಅಡಿಪಾಯವನ್ನು ಹಾಕಿದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಂವಿಧಾನದ ನಿರ್ಮಾತೃಗಳಿಗೆ ಗೌರವ ಸಲ್ಲಿಸಿದರು.
ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿರುವ ಷಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಗುರಿಯತ್ತ ಸಾಮೂಹಿಕವಾಗಿ ಕೆಲಸ ಮಾಡಲು ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವ ಬದ್ಧತೆಯನ್ನು ಪುನರುಚ್ಚರಿಸಲು ದೇಶದ ನಾಗರಿಕರನ್ನು ಒತ್ತಾಯಿಸಿದರು.

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ವಿಷ್​

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ದೇಶವಾಸಿಗಳಿಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದು, ಎರಡೂ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಉಲ್ಲೇಖಿಸುತ್ತಾ, ರಕ್ಷಣೆ, ಇಂಧನ, ನಿರ್ಣಾಯಕ ಖನಿಜಗಳು ಮತ್ತು ಉದಯೋನ್ಮುಖ ತಂತ್ರಜ್ಞಾನಗಳು ಸೇರಿದಂತೆ ಕ್ಷೇತ್ರಗಳಲ್ಲಿ ನಿಕಟ ಸಹಕಾರವನ್ನು ಒತ್ತಿ ಹೇಳಿದ್ದಾರೆ.

ಭೂತಾನ್‌ ಪ್ರಧಾನಿ ತ್ಸೆರಿಂಗ್ ಟೋಬ್ಗೆ

ಭೂತಾನ್‌ ಪ್ರಧಾನಿ ತ್ಸೆರಿಂಗ್ ಟೋಬ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ನಾಗರಿಕರಿಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದು, ಉಭಯ ರಾಷ್ಟ್ರಗಳ ನಡುವಿನ ನಿಕಟ ಬಾಂಧವ್ಯ ಮತ್ತು ಹಂಚಿಕೆಯ ಮೌಲ್ಯಗಳನ್ನು ಉಲ್ಲೇಖಿಸಿದ್ದಾರೆ.
ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿರುವ ಟೋಬ್ಗೆ, ಈ ಸಂದರ್ಭವು ಭಾರತದ ಸ್ಪೂರ್ತಿದಾಯಕ ಪ್ರಯಾಣವನ್ನು ಆಚರಿಸುತ್ತದೆ ಮತ್ತು ಭಾರತ-ಭೂತಾನ್ ಸಂಬಂಧಗಳ ನಿರಂತರ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು(ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net