17 ವರ್ಷದ ಬಾಲಕಿಯನ್ನು ಹಿಂಬಾಲಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಜ್‌ಕುಮಾರ್ ವಿರುದ್ಧ ಈ ಹಿಂದೆ ಪೋಕ್ಸೊ ಕಾಯ್ದೆಯ ಸೆಕ್ಷನ್ 11 ಮತ್ತು 12 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಈ ಅಪರಾಧಗಳಿಗೆ 7 ವರ್ಷಗಳಿಗಿಂತ ಕಡಿಮೆ ಅವಧಿಯ ಶಿಕ್ಷೆ ಇರುವ ಕಾರಣ, ಆತನಿಗೆ 20,000 ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ದೊರೆತು ಜೈಲಿನಿಂದ ಬಿಡುಗಡೆಯಾಗಿದ್ದರು.