ಪೋಕ್ಸೋ ಪ್ರಕರಣ: 24 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ | POCSO case

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಚೆನ್ನೈ: 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪೋಕ್ಸೋ ಪ್ರಕರಣದಲ್ಲಿ(POCSO case) ಪುದುಚೇರಿಯ 24 ವರ್ಷದ ಆರೋಪಿಗೆ ಸ್ಥಳೀಯ ವಿಶೇಷ ನ್ಯಾಯಾಲಯವು ಮಂಗಳವಾರ(ಮೇ 26) ಅಂತಿಮ ತೀರ್ಪು ನೀಡಿದ್ದು, 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ಆರ್. ಎಗಿಲರಸನ್ ಅಲಿಯಾಸ್ ಬಾಂಬ್ ಎಗಿಲ್ ಎಂಬ ವ್ಯಕ್ತಿ 2023ರಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿತ್ತು. ಪುದುಚೇರಿಯ ಅರುಂಪಾರ್ಥಪುರಂನಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು ಆರೋಪಿಯನ್ನು ಅಪರಾಧಿ ಎಂದು ತೀರ್ಪು ನೀಡಿ, 20 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ನಿರ್ದೇಶನ ನೀಡಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net