ಸ್ವಾಮಿ ಅವಿಮುಕ್ತೇಶ್ವರಾನಂದ ಶಂಕರಾಚಾರ್ಯ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ ದಾಖಲು | POCSO case

ಸ್ವಾಮಿ ಅವಿಮುಕ್ತೇಶ್ವರಾನಂದ ಶಂಕರಾಚಾರ್ಯ ಸ್ವಾಮೀಜಿ
ಸ್ವಾಮಿ ಅವಿಮುಕ್ತೇಶ್ವರಾನಂದ ಶಂಕರಾಚಾರ್ಯ ಸ್ವಾಮೀಜಿ
Published on
ಲಖನೌ: ಇತ್ತೀಚಿಗೆ ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಕಟು ಟೀಕಾಕಾರರಾಗಿ ಗುರುತಿಸಿಕೊಂಡಿರುವ ಸ್ವಾಮಿ ಅವಿಮುಕ್ತೇಶ್ವರಾನಂದ ಶಂಕರಾಚಾರ್ಯ ಸ್ವಾಮೀಜಿ ವಿರುದ್ಧ ಪ್ರಯಾಗ್​ರಾಜ್ ಪೊಲೀಸರು ಪೋಕ್ಸೋ ಕೇಸ್(POCSO case) ದಾಖಲಿಸಿದ್ದಾರೆ ಎಂದು ಸೋಮವಾರ(ಫೆ. 23) ವರದಿಯಾಗಿದೆ.
ಅಪ್ರಾಪ್ತ ವಯಸ್ಕ ಸೇರಿದಂತೆ ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸ್ವಾಮಿ ರಾಮಭದ್ರಾಚಾರ್ಯರ ಶಿಷ್ಯ ಅಶುತೋಷ್ ಬ್ರಹ್ಮಚಾರಿ ಮಹಾರಾಜ್ ಮತ್ತು ಇತರರು ಸಲ್ಲಿಸಿದ ದೂರಿನ ಆಧಾರದ ಮೇಲೆ ಪ್ರಯಾಗರಾಜ್‌ನ ಪೋಕ್ಸೋ ನ್ಯಾಯಾಲಯ ಎಫ್​ಐಆರ್ ದಾಖಲಿಸುವಂತೆ ಆದೇಶಿಸಿದೆ. 
ಈ ಆದೇಶದನ್ವಯ ಪ್ರಯಾಗರಾಜ್‌ ಪೊಲೀಸರು ಸ್ವಾಮಿ ಅವಿಮುಕ್ತೇಶ್ವರಾನಂದ ಶಂಕರಾಚಾರ್ಯ ಸ್ವಾಮೀಜಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ಮತ್ತು ಇತರ ಇಬ್ಬರು ಅಥವಾ ಮೂವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಗುರುಕುಲಂ ಮತ್ತು ಮಾಘಮೇಳದಲ್ಲಿ ಗುರು ಸೇವೆಯ ಹೆಸರಿನಲ್ಲಿ ಪದೇ-ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. 
ಇನ್ನೂ ಈ ಕುರಿತು ಪ್ರತಿಕ್ರಿಯೆ ನೀಡಿರುವ ಸ್ವಾಮಿ ಅವಿಮುಕ್ತೇಶ್ವರಾನಂದ ಸ್ವಾಮೀಜಿ, ಇದು ಸುಳ್ಳು ಪ್ರಕರಣವಾಗಿದ್ದು, ಅದಕ್ಕೆ ಕಾರಣರಾದವರನ್ನು ಶಿಕ್ಷಿಸಬೇಕು ಎಂದು ಹೇಳಿದ್ದಾರೆ (ಏಜೆನ್ಸೀಸ್). 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net