ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಪೋಸ್ಟ್; ವಿಚಾರಣೆಗೆ ಹಾಜರಾಗುವಂತೆ ಟಿಎಂಸಿ ನಾಯಕ ಅಭಿಷೇಕ್​ ಬ್ಯಾನರ್ಜಿಗೆ ನೋಟಿಸ್ | Abhishek Banerjee

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಲೋಕಸಭಾ ಸಂಸದ ಅಭಿಷೇಕ್ ಬ್ಯಾನರ್ಜಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಕೋಲ್ಕತ್ತಾ ಪೊಲೀಸರು ಶನಿವಾರ(ನ. 14) ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ.
ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ
ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ
Published on: 

ಕೋಲ್ಕತ್ತಾ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಲೋಕಸಭಾ ಸಂಸದ ಅಭಿಷೇಕ್ ಬ್ಯಾನರ್ಜಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಕೋಲ್ಕತ್ತಾ ಪೊಲೀಸರು ಶನಿವಾರ(ನ. 14) ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ.

ಸುದ್ದಿ ಸಂಸ್ಥೆ ಐಎಎನ್‌ಎಸ್ ವರದಿಯ ಪ್ರಕಾರ, ಮೇ 27ರಂದು ಎಕ್ಸ್‌ನಲ್ಲಿ ಮಾಡಿದ ಪೋಸ್ಟ್​ಗೆ ದಾಖಲಾದ ಪಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕೋಲ್ಕತ್ತಾದ ಭಬಾನಿಪುರ ಪೊಲೀಸ್ ಠಾಣೆಯಲ್ಲಿ ಮಧ್ಯಾಹ್ನ 12.30 ರೊಳಗೆ ಹಾಜರಾಗುವಂತೆ ಬ್ಯಾನರ್ಜಿ ಅವರಿಗೆ ಸೂಚಿಸಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಅವರನ್ನು ಪ್ರಶ್ನಿಸಲು ಬಯಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ತಿಳಿಸಿದೆ.

Also Read
ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ: ಸ್ಪೀಕರ್ ಅಂಗೀಕಾರ | Hardeep Singh Puri
ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ

ಮೇ 27ರಂದು ಎಕ್ಸ್​ನಲ್ಲಿ ಪೋಸ್ಟ್ ಹಾಕಿದ್ದ ಬ್ಯಾನರ್ಜಿ, ಸಿಇಸಿಯನ್ನು ಬಂಗಾಳಿ ವಿರೋಧಿ ಗುಜರಾತಿ ಗ್ಯಾಂಗ್‌ನ ಕೈಗೊಂಬೆ ಎಂದು ಬಣ್ಣಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಭಬಾನಿಪುರ ನಿವಾಸಿ ಅರ್ನಬ್ಕಾಂತಿ ದಾಸ್ ಅವರು ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), 2023ರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಎಫ್‌ಐಆರ್ ದಾಖಲಿಸಲಾಗಿದೆ.

ಬ್ಯಾನರ್ಜಿಯವರ ಹೇಳಿಕೆ ಗುಜರಾತಿ ಸಮುದಾಯವನ್ನು "ಗ್ಯಾಂಗ್" ಎಂದು ಉಲ್ಲೇಖಿಸುವುದು ಅದರ ಸದಸ್ಯರನ್ನು ಅಪರಾಧಿಗಳಂತೆ ಚಿತ್ರಿಸಿದಂತೆ ಮತ್ತು ದೇಶದ ಬಹುತ್ವ ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಹಾಳುಮಾಡುತ್ತದೆ ಎಂದು ದೂರುದಾರರು ಉಲ್ಲೇಖಿಸಿದ್ದಾರೆ (ಏಜೆನ್ಸೀಸ್).