ಆದರೆ, ಜನವರಿಯಲ್ಲಿ ಸಂಭವಿಸಿದ ಭೀಕರ ಅಪಘಾತವೊಂದು ಈ ದಂಪತಿಯ ಎಲ್ಲಾ ಕನಸುಗಳನ್ನು ನುಚ್ಚುನೂರು ಮಾಡಿತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ವಾರಗಳ ಕಾಲ ಚಿಕಿತ್ಸೆ ಪಡೆಯುತ್ತಿದ್ದ ಮಣಿ, ಎರಡು ತಿಂಗಳ ಹಿಂದೆ ಸಾವಿಗೀಡಾದರು. ಮಣಿಯೊಂದಿಗೆ ಸುಂದರ ಜೀವನದ ಕನಸು ಕಂಡಿದ್ದ ಪ್ರಫುಲ್ಲಾ ಈ ಸಾವು ಕಂಡು ಸಂಪೂರ್ಣವಾಗಿ ಕುಗ್ಗಿ ಹೋಗಿದ್ದರು. ಕುಟುಂಬ ಸದಸ್ಯರೆಲ್ಲರೂ ಸಂಬಂಧಿಕರ ಮದುವೆ ಸಮಾರಂಭಕ್ಕೆ ತೆರಳಿದ್ದ ಸಮಯದಲ್ಲಿ, ಪ್ರಫುಲ್ಲಾ ಮನೆಯಲ್ಲಿ ಯಾರು ಇಲ್ಲದನ್ನು ನೋಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.