ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ದೇಶದ ವಿವಿಧ ಮೂಲೆಗಳಿಂದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಹಾರೈಕೆಗಳ ಮಹಾಪೂರವೇ ಹರಿದುಬಂದಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಅವರು ಯಶಸ್ವಿಯಾಗಿ ನಡೆಸಿದ ಭಾರತ್ ಜೋಡೋ ಯಾತ್ರೆ, ಸಾಮಾನ್ಯ ಜನರೊಂದಿಗೆ ಅವರು ನಿರಂತರವಾಗಿ ಇಟ್ಟುಕೊಂಡಿರುವ ಸಂಪರ್ಕ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಪ್ರಧಾನ ವಿರೋಧ ಪಕ್ಷದ ಪ್ರಬಲ ಧ್ವನಿಯಾಗಿ ಅವರು ಕಾರ್ಯನಿರ್ವಹಿಸುತ್ತಿರುವ ಶೈಲಿಯನ್ನು ಅನೇಕ ನಾಯಕರು ಈ ಸಂದರ್ಭದಲ್ಲಿ ನೆನಪಿಸಿಕೊಂಡಿದ್ದಾರೆ(ಏಜೆನ್ಸೀಸ್).