ಸುಪ್ರೀಂ ಕೋರ್ಟ್(ನ್ಯಾಯಾಧೀಶರ ಸಂಖ್ಯೆ) ಕಾಯ್ದೆ, 1956 ಕ್ಕೆ ತಿದ್ದುಪಡಿ ತರುವ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದ ಕೆಲವು ದಿನಗಳ ನಂತರ ಈ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಈ ಮೊದಲು ಮೇ 5ರಂದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆಯನ್ನು ನಾಲ್ಕು ಹೆಚ್ಚಿಸುವ ಮತ್ತು ಸಂಸತ್ತಿನಲ್ಲಿ ಮಂಡಿಸುವ ಸುಪ್ರೀಂ ಕೋರ್ಟ್ (ನ್ಯಾಯಾಧೀಶರ ಸಂಖ್ಯೆ) ತಿದ್ದುಪಡಿ ಮಸೂದೆ- 2026 ಅನ್ನು ಮಂಡಿಸುವ ಪ್ರಸ್ತಾವನೆಯನ್ನು ಅಂಗೀಕರಿಸಿತ್ತು (ಏಜೆನ್ಸೀಸ್).