ವಿಪಕ್ಷಗಳ ಗದ್ದಲದ ಮಧ್ಯೆ ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ ಮಂಡನೆ: ನಾಳೆ ಸಂಸತ್ನಲ್ಲಿ ಚರ್ಚೆ ಸಾಧ್ಯತೆ | Prevention of Question Paper Leaks Bill
ಕೇಂದ್ರ ಸಚಿವ ಜಿತೇಂದ್ರ ಸಿಂಗ್
Published on:
Copied
Follow Us
ನವದೆಹಲಿ: ಜಂತರ್ ಮಂತರ್ನಲ್ಲಿ ನಡೆದ ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಬಗ್ಗೆ ಚರ್ಚಿಸಬೇಕೆಂದು ಒತ್ತಾಯಿಸಿ ವಿಪಕ್ಷಗಳು ಗದ್ದಲ ಮಾಡ್ತಿರುವ ನಡುವೆಯೂ ಕೇಂದ್ರ ಸರ್ಕಾರ ಇಂದು(ಜು. 27) ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ-2026(Prevention of Question Paper Leaks Bill) ಮಂಡನೆ ಮಾಡಿದ್ದು, ನಾಳೆ ಈ ಕುರಿತು ಉಭಯ ಸದನಗಳಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಲೋಕಸಭೆಯಲ್ಲಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಈ ಪ್ರಸ್ತಾವಿತ ಮಸೂದೆಯನ್ನು ಮಂಡಿಸಿದ್ದಾರೆ. ಈ ನೂತನ ಮಸೂದೆಯೂ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ರೆ ಅಂತಹ ಅಪರಾಧಿಗಳಿಗೆ 3 ತಿಂಗಳೊಳಗೆ ಕ್ರಮ, 10 ಕೋಟಿ ರೂ. ದಂಡ, 10 ವರ್ಷ ಜೈಲು ಶಿಕ್ಷೆ ವಿಧಿಸುವ ಪ್ರಸ್ತಾಪವನ್ನೊಳಗೊಂಡಿದೆ.
ಇನ್ನೂ ಉಭಯ ಸದನಗಳಲ್ಲಿ ವಿಪಕ್ಷಗಳು ಜುಲೈ 20ರಂದು ಸಂಸತ್ತಿಗೆ ಸಿಜೆಪಿ ನೇತೃತ್ವದ ಮೆರವಣಿಗೆ ಮತ್ತು ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಕ್ರಮದ ಸರ್ಕಾರದ ಪ್ರತಿಕ್ರಿಯೆ ನೀಡಬೇಕು ಮತ್ತು ಆ ಕುರಿತು ಚರ್ಚೆ ನಡೆಯಬೇಕೆಂದು ಒತ್ತಾಯಿಸಿ ವಿಪಕ್ಷಗಳ ಸಂಸದರು ಪ್ರತಿಭಟನೆ ನಡೆಸಿದ್ದರಿಂದ ಎರಡೂ ಸದನಗಳನ್ನು ನಾಳೆಗೆ ಮುಂದೂಡಲಾಗಿದೆ.
ಇನ್ನೂ ಇಂದು ಸಂಜೆ 5 ಗಂಟೆಗೆ ಸರ್ಕಾರ ಮತ್ತು ವಿಪಕ್ಷಗಳ ನಾಯಕರ ಜೊತೆ ಸ್ಪೀಕರ್ ಓಂ ಬಿರ್ಲಾ ಸಭೆ ನಡೆಸಿದ್ದರು. ಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ-2026 ಕುರಿತು ಚರ್ಚೆ ನಡೆಸಲು ಎಲ್ಲಾ ರಾಜಕೀಯ ಪಕ್ಷಗಳ ನಾಯಕರ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.
ಮಂಗಳವಾರ(ಜು. 28) ಓಂ ಬಿರ್ಲಾ ಅವರ ನಿರ್ಧಾರ ಮತ್ತು ನಿರಂತರ ಸಂವಾದದ ಬಳಿಕ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯನ್ನು ಚರ್ಚಿಸಲು ಒಪ್ಪಿಕೊಂಡಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ (ಏಜೆನ್ಸೀಸ್).