ಜೂನ್ 20 ಮತ್ತು 21 ರಂದು ಪಶ್ಚಿಮ ಬಂಗಾಳದಲ್ಲಿ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಜ್ಯ ಸಂಸ್ಥಾಪನಾ ದಿನದ ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ. ನಂತರ ಜೂನ್ 21ರ ಭಾನುವಾರ ಮುಂಜಾನೆ ನಡೆಯಲಿರುವ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಯೋಗ ಪ್ರದರ್ಶನ ನೀಡಲಿದ್ದಾರೆ. ಪ್ರಧಾನಿಗಳ ಭೇಟಿಯ ಹಿನ್ನೆಲೆಯಲ್ಲಿ ಕೋಲ್ಕತಾ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ,(ಏಜೆನ್ಸೀಸ್).