ಸ್ಪಾದಲ್ಲಿ ವೇಶ್ಯಾವಾಟಿಕೆ: ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ ಪೊಲೀಸರು | Spa
ಸಾಂದರ್ಭಿಕ ಚಿತ್ರ
Published on:
Copied
Follow Us
ಮುಂಬೈ: ಸ್ಪಾ(Spa) ಸೋಗಿನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಬಯಲಿಗೆಳೆದಿರುವ ಮುಂಬೈ ಪೊಲೀಸರು, ಖಚಿತ ಮಾಹಿತಿ ಮೇರೆಗೆ ಸ್ಥಳದಲ್ಲಿ ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿ, ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ ಎಂದು ಬುಧವಾರ(ಆ. 12) ವರದಿಯಾಗಿದೆ.
ಮುಂಬೈನ ದಾದರ್ ಪ್ರದೇಶದ ಸ್ಟಾರ್ ಮಾಲ್‌ನಲ್ಲಿರುವ ರೆಬೆಲ್ ಥಾಯ್ ಸ್ಪಾ ಮೇಲೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಶಿವಾಜಿ ಪಾರ್ಕ್ ಪೊಲೀಸರು, ಸೇವೆಗಳ ಹೆಸರಿನಲ್ಲಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಬಯಲು ಮಾಡಿದ್ದಾರೆ.
ದಾಳಿಯ ಸಮಯದಲ್ಲಿ ಪೊಲೀಸರು ಆರು ಮಹಿಳೆಯರನ್ನು ರಕ್ಷಿಸಿದ್ದು, ಅವರೆಲ್ಲರೂ 25 ರಿಂದ 30 ವರ್ಷ ವಯಸ್ಸಿನವರು ಎಂದು ತಿಳಿದು ಬಂದಿದೆ. ಮಹಿಳಾ ಬ್ರೋಕರ್ ಮತ್ತು ಸ್ಪಾ ಮ್ಯಾನೇಜರ್ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಆಶಾ ಪರ್ಮಾರ್, ಸ್ಪಾ ಮ್ಯಾನೇಜರ್ ಸಾಹಿಲ್ ಪಿಳ್ಳೈ, ಕೈಲಾಶ್ ಯಾದವ್ ಮತ್ತು ಕರಣ್ ವರ್ಧನ್ ಎಂದು ಗುರುತಿಸಲಾಗಿದೆ. ಇನ್ನೂ ಶಿವಾಜಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಪಾದಿತ ದಂಧೆ ಮತ್ತು ಬಂಧಿತ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಸಲಾಗುತ್ತಿದೆ (ಏಜೆನ್ಸೀಸ್).