ಸಿಇಸಿ ವಿರುದ್ಧ ಇಂಡಿಯಾ ಕೂಟ ಪ್ರತಿಭಟನೆ; ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು | Congress leaders

ಎಸ್​ಐಆರ್ ವಿವಾದ ಮತ್ತು ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಆಕಾಶವಾಣಿ ಆವರಣದಲ್ಲಿ ಇಂಡಿಯಾ ಕೂಟದ ನಾಯಕರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪೊಲೀಸರು ಮಧ್ಯಪ್ರವೇಶಿಸಿದ್ದು, ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ರಾಹುಲ್ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದಿರುವುದು.
ರಾಹುಲ್ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದಿರುವುದು.
Published on: 

ನವದೆಹಲಿ: ಎಸ್​ಐಆರ್ ವಿವಾದ ಮತ್ತು ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಆಕಾಶವಾಣಿ ಆವರಣದಲ್ಲಿ ಇಂಡಿಯಾ ಕೂಟದ ನಾಯಕರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪೊಲೀಸರು ಮಧ್ಯಪ್ರವೇಶಿಸಿದ್ದು, ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಬೆಳಗ್ಗೆ ಸಂಸತ್ ಆವರಣದಿಂದ ಮೆರವಣಿಗೆ ನಡೆಸಿ ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕಲೆತ್ನಿಸಿದ್ದ ಇಂಡಿಯಾ ಕೂಟ ನಾಯಕರನ್ನು ಪೊಲೀಸರು ಆಕಾಶವಾಣಿ ಬಳಿಯೇ ಬ್ಯಾರಿಕೇಡ್ ಹಾಕಿ ತಡೆದಿದ್ದರು. ಬಳಿಕ ಅಲ್ಲಿಯೇ ಕುಳಿತು ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ ನಾಯಕರು ಧರಣಿ ಮುಂದುವರೆಸಿದ್ದರು.

ರಾತ್ರಿ 8 ಗಂಟೆ ಸುಮಾರಿಗೆ ದೆಹಲಿ ಪೊಲೀಸರು ಆಕಾಶವಾಣಿ ಆವರಣದಿಂದ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದು ಬಸ್‌ನಲ್ಲಿ ಕರೆದೊಯ್ದ ಸಂಸದರಲ್ಲಿ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಸೇರಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ತಡೆಯಲು ಯತ್ನಿಸಿದ್ದು, ಪೊಲೀಸರು ರಾಹುಲ್ ಗಾಂಧಿಯನ್ನು ಎಳೆದುಕೊಂಡು ಹೋಗುತ್ತಿರುವ ದೃಶ್ಯಗಳು ಕ್ಯಾಮಾರಾದಲ್ಲಿ ಸೆರೆಯಾಗಿವೆ.

Also Read
ಸಿಇಸಿ ರಾಜೀನಾಮೆಗೆ ಆಗ್ರಹಿಸಿ ಧರಣಿ: ಇಂಡಿಯಾ ಕೂಟದ ಪ್ರತಿಭಟನೆಗೆ ಬೆಂಬಲ ನೀಡಿದ ಬಿಜೆಡಿ: ನವೀನ್ ಪಟ್ನಾಯಕ್​ಗೆ ಧನ್ಯವಾದ ಹೇಳಿದ ಮಮತಾ | BJD
ರಾಹುಲ್ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದಿರುವುದು.

ಒಟ್ಟು 50 ಸಂಸದರು ಸೇರಿದಂತೆ ಸುಮಾರು 250 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದು, ಕಿಂಗ್ಸ್‌ವೇ ಕ್ಯಾಂಪ್‌ನಲ್ಲಿರುವ ನ್ಯೂ ಪೊಲೀಸ್ ಲೈನ್ಸ್‌ಗೆ ಕರೆದೊಯ್ಯಲಾಗುತ್ತಿದೆ ಎಂದು ಹೇಳಿದ್ದಾರೆ.

ಇನ್ನೂ ಧರಣಿ ಕುಳಿತಿದ್ದ ವೇಳೆ ಮಾತನಾಡಿದ್ದ ರಾಹುಲ್ ಗಾಂಧಿ, ಇಲ್ಲಿ ಕುಳಿತುಕೊಳ್ಳುವಲ್ಲಿ ನಮಗೆ ಯಾವುದೇ ಸಮಸ್ಯೆಯಿಲ್ಲ. ನಮಗೆ ಇಲ್ಲಿ ಆರಾಮದಾಯಕವಾಗಿದೆ. ನಾವು ಇಲ್ಲಿ ಹಾಸಿಗೆಗಳನ್ನು ಹಾಕಿಕೊಂಡಿದ್ದೇವೆ. ಇಲ್ಲಿ ಶೌಚಾಲಯದ ವ್ಯವಸ್ಥೆಯಿದೆ ಮತ್ತು ಚಹಾವೂ ಲಭ್ಯವಿದೆ. ನಮಗೆ ಅಗತ್ಯವಿರುವಷ್ಟು ಕಾಲ ನಾವು ಇಲ್ಲಿಯೇ ಕುಳಿತುಕೊಳ್ಳುತ್ತೇವೆ ಎಂದು ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಹೇಳಿದ್ದರು.

ಮತ ಕಳ್ಳತನದ ವಿರುದ್ಧ ನಾವು ಇಲ್ಲಿ ಪ್ರತಿಭಟಿಸುತ್ತಿದ್ದೇವೆ. ನಾವು ಇಲ್ಲಿ ಕುಳಿತುಕೊಳ್ಳುವುದರಿಂದ ಸರ್ಕಾರಕ್ಕೆ ಏನಾದರೂ ಸಮಸ್ಯೆಯಿದ್ದರೆ, ಎಲ್ಲಿ ಕುಳಿತು ಪ್ರತಿಭಟಿಸಬೇಕು ಎಂದು ನಮಗೆ ತಿಳಿಸಲಿ. ನಾವು ಅಲ್ಲಿಯೇ ಕುಳಿತುಕೊಳ್ಳುತ್ತೇವೆ. ನಾವು ಚುನಾವಣಾ ಆಯುಕ್ತರನ್ನು ಭೇಟಿಯಾಗಬೇಕು ಎಂದು ತಿಳಿಸಿದ್ದರು (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net