ಚುನಾವಣಾ ಅಕ್ರಮಗಳು ಮತ್ತು ಆಯೋಗದ ಕಾರ್ಯವೈಖರಿ ಬಗ್ಗೆ ತನಿಖೆಗೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ಪಂಜಾಬ್ ವಿಧಾನಸಭೆ | Punjab

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗದ ಚುನಾವಣಾ ಅಕ್ರಮಗಳು ಮತ್ತು ಕಾರ್ಯವೈಖರಿಗೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಶುಕ್ರವಾರ(ಅ. 23) ಪಂಜಾಬ್ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.
ಚುನಾವಣಾ ಅಕ್ರಮಗಳು ಮತ್ತು ಆಯೋಗದ ಕಾರ್ಯವೈಖರಿ ಬಗ್ಗೆ ತನಿಖೆಗೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ಪಂಜಾಬ್ ವಿಧಾನಸಭೆ | Punjab
Published on: 

ಚಂಡೀಗಢ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗದ ಚುನಾವಣಾ ಅಕ್ರಮಗಳು ಮತ್ತು ಕಾರ್ಯವೈಖರಿಗೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಶುಕ್ರವಾರ(ಅ. 23) ಪಂಜಾಬ್ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.

ವಿಧಾನಸಭೆಯಲ್ಲಿ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಅವರು ಈ ನಿರ್ಣಯವನ್ನು ಮಂಡಿಸಿದರು. ಆಡಳಿತರೂಢ ಎಎಪಿ ಶಾಸಕರು ನಿರ್ಣಯವನ್ನು ಬೆಂಬಲಿಸಿದ್ದಾರೆ. ಈ ವೇಳೆ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂಬ ಆರೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ವಿಧಾನಸಭೆ, ಎಲ್ಲಾ ಅರ್ಹ ನಾಗರಿಕರ ಮತದಾನದ ಹಕ್ಕುಗಳನ್ನು ರಕ್ಷಿಸಬೇಕೆಂದು ಒತ್ತಾಯಿಸಿತು.

ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಭಗವಂತ್ ಮಾನ್, ಮತಗಳ್ಳತನ ಆರೋಪದ ಮೇಲೆ ಬಿಜೆಪಿಯನ್ನು ಟೀಕಿಸಿದರು. ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ದೇಶಾದ್ಯಂತ 14 ಕೋಟಿ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಹೇಳಿದರು.

Also Read
ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲೇ ಮಾಂಸಹಾರ ನಿಷೇಧಿಸಿದ ಕೇರಳ ರಾಜ್ಯಪಾಲ ಮಾಥುರ್: ಕಾಂಗ್ರೆಸ್​ ಕಿಡಿ | Kerala Governor
ಚುನಾವಣಾ ಅಕ್ರಮಗಳು ಮತ್ತು ಆಯೋಗದ ಕಾರ್ಯವೈಖರಿ ಬಗ್ಗೆ ತನಿಖೆಗೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ಪಂಜಾಬ್ ವಿಧಾನಸಭೆ | Punjab

ನಿರ್ಣಯ ಮಂಡಿಸುವಾಗ ಮಾತನಾಡಿರುವ ಸಚಿವ ಚೀಮಾ, ಬಡವರಿಂದ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಕಳೆದ ವರ್ಷ ನಡೆದ ದೆಹಲಿ ವಿಧಾನಸಭಾ ಚುನಾವಣೆಯನ್ನು ಉಲ್ಲೇಖಿಸಿ, ಬಿಜೆಪಿ 'ವೋಟ್ ಚೋರಿ' ಮೂಲಕ ಅಧಿಕಾರಕ್ಕೆ ಬಂದಿತು ಎಂದು ಆರೋಪಿಸಿದರು.

ನಿರ್ಣಯದಲ್ಲಿ, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನ ಮತವು ಅಮೂಲ್ಯವಾದುದು ಎಂದು ಈ ಸದನವು ದೃಢವಾಗಿ ಪುನರುಚ್ಚರಿಸುತ್ತದೆ. ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಾನೂನುಬಾಹಿರವಾಗಿ ಕಸಿದುಕೊಳ್ಳುವುದು ಸಾಂವಿಧಾನಿಕ ಪ್ರಜಾಪ್ರಭುತ್ವದ ಮೂಲಭೂತ ಮೌಲ್ಯಗಳಿಗೆ ವಿರುದ್ಧವಾಗಿದೆ. ದೇಶದ ಪ್ರಜಾಪ್ರಭುತ್ವವನ್ನು ಕಾಪಾಡಲು ಜನರ ಮತದಾನದ ಹಕ್ಕುಗಳನ್ನು ರಕ್ಷಿಸುವುದು ಮತ್ತು ಚುನಾವಣಾ ಸಂಸ್ಥೆಗಳ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ.

ಈ ಸದನವು ಚುನಾವಣಾ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿಗಳಿಗೆ ಸಂಬಂಧಿಸಿದ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಸ್ವತಂತ್ರ, ನಿಷ್ಪಕ್ಷಪಾತ ಮತ್ತು ವಿಶ್ವಾಸಾರ್ಹ ತನಿಖಾ ಕಾರ್ಯವಿಧಾನವನ್ನು ಸ್ಥಾಪಿಸಲು ಒತ್ತಾಯಿಸುತ್ತದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ, ಸತ್ಯ ಬೆಳಕಿಗೆ ಬರಲು ಮತ್ತು ಹೊಣೆಗಾರಿಕೆಯನ್ನು ಸರಿಪಡಿಸಲು ಸಾಧ್ಯವಾಗುತ್ತದೆ. ತನಿಖೆಯ ಸಮಯದಲ್ಲಿ ಯಾವುದೇ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಉಲ್ಲಂಘನೆಯ ಸ್ಪಷ್ಟ ಪುರಾವೆಗಳು ಹೊರಹೊಮ್ಮಿದರೆ, ಕಾನೂನಿನ ಪ್ರಕಾರ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಪ್ರಾರಂಭಿಸಬೇಕು ಒತ್ತಾಯಿಲಾಗಿದೆ (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net