ಮೊದಲು ಬ್ಯಾಟಿಂಗ್ ಮಾಡಲು ಇಳಿದ ಕೆಕೆಆರ್ ತಂಡಕ್ಕೆ ಆರಂಭಿಕರಾದ ಅಜಿಂಕ್ಯ ರಹಾನೆ ಮತ್ತು ಫಿನ್ ಅಲೆನ್ ಕೇವಲ 5.2 ಓವರ್‌ಗಳಲ್ಲಿ 69 ರನ್‌ಗಳನ್ನು ಸೇರಿಸುವ ಮೂಲಕ ಸ್ಫೋಟಕ ಆರಂಭ ನೀಡಿದರು. ಫಿನ್ ಅಲೆನ್ ಕೇವಲ 37 ರನ್ ಗಳಿಸಿ ಔಟಾದರೂ, ರಹಾನೆ ತಮ್ಮ ಅನುಭವವನ್ನು ಧಾರೆ ಎರೆದರು. ಕೇವಲ 40 ಎಸೆತಗಳಲ್ಲಿ 67 ರನ್ ಬಾರಿಸಿದ ರಹಾನೆ, ಮುಂಬೈ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು.