ಭಾರತದ ಹಿತದೃಷ್ಟಿಯಿಂದ ಪ್ರಧಾನ ಮಂತ್ರಿ ಹುದ್ದೆಯನ್ನು ವಹಿಸಿಕೊಳ್ಳುವ ಇಚ್ಚೆ ವ್ಯಕ್ತಪಡಿಸಿದ ರಾಹುಲ್ ಗಾಂಧಿ | Rahul Gandhi

ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published on
ಹೈದರಾಬಾದ್: ಇದೇ ಮೊದಲ ಬಾರಿಗೆ ಎಂಬಂತೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ದೇಶದ ಹಿತದೃಷ್ಟಿಯಿಂದ ಪ್ರಧಾನ ಮಂತ್ರಿ ಹುದ್ದೆಯನ್ನು ವಹಿಸಿಕೊಳ್ಳುವ ಇಚ್ಚೆಯನ್ನು ವ್ಯಕ್ತಪಡಿಸಿದ್ದಾರೆ.
ತೆಲಂಗಾಣದ ವಿಕಾರಾಬಾದ್​ನಲ್ಲಿ ನಡೆದ ಡಿಸಿಸಿ ಅಧ್ಯಕ್ಷರ ತರಬೇತಿ ಕಾರ್ಯಕ್ರಮದಲ್ಲಿ ಸಿಎಂ ರೇವಂತ್ ರೆಡ್ಡಿ, ರಾಷ್ಟ್ರದ ಹಿತದೃಷ್ಟಿಯಿಂದ ಪ್ರಧಾನಿ ಹುದ್ದೆಯನ್ನು ವಹಿಸಿಕೊಳ್ಳಲು ರಾಹುಲ್ ಗಾಂಧಿಯವರು ಸಿದ್ದರಾಗಬೇಕು. ಪ್ರಧಾನಿ ಹುದ್ದೆಯು ಒಂದು ಆಭರಣವಲ್ಲ, ಬದಲಾಗಿ ಈ ದೇಶದ ಜನರಿಗೆ ಸೇವೆ ಸಲ್ಲಿಸುವ ಜವಾಬ್ದಾರಿಯಾಗಿದೆ. ಆ ಜವಾಬ್ದಾರಿಯನ್ನು ಹೊರಲು ತಮ್ಮ ಸಿದ್ಧತೆಯನ್ನು ವ್ಯಕ್ತಪಡಿಸಬೇಕು. ಇದು ಪ್ರತಿ ಕಾಂಗ್ರೆಸ್ ಕಾರ್ಯಕರ್ತನ ಬಯಕೆ, ಅದಕ್ಕೆ ಎಲ್ಲರೂ ಶ್ರಮಿಸಬೇಕು ಎಂದಿದ್ದರು.
ರಾಹುಲ್ ಗಾಂಧಿ ಅವರನ್ನು ನಮ್ರತೆ ಮತ್ತು ಸರಳತೆಯಿಂದ ಎಲ್ಲರೊಂದಿಗೂ ಸಂವಹನ ನಡೆಸುವ ನಾಯಕ ಬಣ್ಣಿಸಿರುವ ರೇವಂತ್ ರೆಡ್ಡಿ, ಐದು ವರ್ಷಗಳ ನಿರಂತರ ಹೋರಾಟದ ಮೂಲಕ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಗಳಿಸಿದ್ದಾರೆ. ವೈಯಕ್ತಿಕವಾಗಿ ಪ್ರಧಾನಿ ಆಗಬೇಕೆಂಬ ಮಹತ್ವಕಾಂಕ್ಷಿ ಅವರಲ್ಲಿ ಇಲ್ಲ, ಆದರೆ ಅವರ ತಂದೆ, ಅಜ್ಜಿ ಹಾಗೂ ಮುತ್ತಜ್ಜ ಪ್ರಧಾನಿಯಾಗಿ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ಸಿಎಂ ರೇವಂತ್ ರೆಡ್ಡಿ ಅವರ ಮಾತಿಗೆ ರಾಹುಲ್ ಗಾಂಧಿ ಸಕರಾತ್ಮಕವಾಗಿ ಸ್ಪಂದಿಸಿದ್ದು, ಹುದ್ದೆಯನ್ನು ನಿಭಾಯಿಸುವುದಾಗಿ ಹೇಳಿದ್ದಾರೆ ಎಂದು ಹೇಳಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net