ಎಸ್​ಐಆರ್ ವಿರೋಧಿ ಪ್ರತಿಭಟನೆಗಳ ನಡುವೆ ವಿಯೆಟ್ನಾಂಗೆ ಹಾರಿದ ರಾಹುಲ್ ಗಾಂಧಿ | Rahul Gandhi

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್​ಐಆರ್) ಅಕ್ರಮ ಆರೋಪ ಮತ್ತು ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸರಣಿ ಪ್ರತಿಭಟನೆಗಳನ್ನು ನಡೆಸುತ್ತಿರುವ ನಡುವೆಯೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು, ಭಾನುವಾರ(ಅ. 18) ವಿಯೆಟ್ನಾಂಗೆ ತೆರಳಿದ್ದಾರೆ ಎಂದು ವರದಿಯಾಗಿದೆ.
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ
Published on: 

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್​ಐಆರ್) ಅಕ್ರಮ ಆರೋಪ ಮತ್ತು ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸರಣಿ ಪ್ರತಿಭಟನೆಗಳನ್ನು ನಡೆಸುತ್ತಿರುವ ನಡುವೆಯೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು, ಭಾನುವಾರ(ಅ. 18) ವಿಯೆಟ್ನಾಂಗೆ ತೆರಳಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ ಮಧ್ಯಾಹ್ನ 1.35 ರ ಸುಮಾರಿಗೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ (IGI) ವಿಮಾನ ನಿಲ್ದಾಣದಿಂದ ಹನೋಯ್‌ಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈಯಕ್ತಿಕ ಭೇಟಿಯೋ ಅಥವಾ ಯಾವುದಾದರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೋ ಎಂಬ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕಾಂಗ್ರೆಸ್ ಸಹ ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

Also Read
ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್​ಗೆ ಸಾಹೇಬ್ ಎಂದ ಡಿಸಿಪಿ: ದೆಹಲಿ ಪೊಲೀಸರ ವಿರುದ್ಧ ಕಿಡಿಕಾರಿದ ಅಭಿಜಿತ್ ದಿಪ್ಕೆ | Abhijeet Dipke
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಹುಲ್ ಗಾಂಧಿಯವರ ವೈಯಕ್ತಿಕ ವಿದೇಶಿ ಪ್ರವಾಸಗಳ ಬಗ್ಗೆ ಬಹಳ ಮೊದಲಿನಿಂದಲೂ ಬಿಜೆಪಿ ಟೀಕಿಸುತ್ತಾ ಬಂದಿದೆ. ಕಳೆದ ಜನವರಿಯಲ್ಲೂ ರಾಹುಲ್ ವಿಯೆಟ್ನಾಂಗೆ ಭೇಟಿ ನೀಡಿದ್ದರು. ಯಾವ ಕಾರ್ಯಕ್ರಮ, ಅವರನ್ನು ಯಾರು ಆಹ್ವಾನಿಸುತ್ತಾರೆ ಎಂಬುದನ್ನು ಕಾಂಗ್ರೆಸ್ ಬಹಿರಂಗಪಡಿಸಬೇಕು ಎಂದು ಬಿಜೆಪಿ ಒತ್ತಾಯಿಸಿತ್ತು.

ಅಲ್ಲದೇ ವಿದೇಶಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರವನ್ನು ಟೀಕಿಸುವ ಮೂಲಕ ಅವರು ಭಾರತದ ವರ್ಚಸ್ಸಿಗೆ ಕಳಂಕ ತರುತ್ತಿದ್ದಾರೆ ಎಂದು ಆರೋಪಿಸಿತ್ತು (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net