ಯುಜಿಸಿ-ನೆಟ್ ಮರುಪರೀಕ್ಷೆ; NTA ವಿರುದ್ಧ ರಾಹುಲ್ ಗಾಂಧಿ ಸಿಡಿಮಿಡಿ | UGC-NET Re-examination
ಯುಜಿಸಿ-ನೆಟ್ ಮರುಪರೀಕ್ಷೆ ವಿರುದ್ಧ ರಾಹುಲ್ ಗಾಂಧಿ ಕಿಡಿ
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಯುಜಿಸಿ-ನೆಟ್ ಮರುಪರೀಕ್ಷೆ ನಡೆಸಲು NTA ನಿರ್ಧಾರ
ಎನ್ಟಿಎ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ
ಪ್ರಧಾನಿ ನರೇಂದ್ರ ಮೋದಿ ಉದ್ದೇಶಿಸಿ ರಾಹುಲ್ ಕಿಡಿ-ಕಿಡಿ
UGC-NET Re-Examination: ಯುಜಿಸಿ-ನೆಟ್ ಪರೀಕ್ಷೆಯ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮರುಪರೀಕ್ಷೆ ನಡೆಸುವುದಾಗಿ ಹೇಳಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಮತ್ತು ಎನ್ಟಿಎ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪರೀಕ್ಷಾ ಅಕ್ರಮಗಳಿಗೆ ಯಾರು ಹೊಣೆ?
ರಾಹುಲ್ ಗಾಂಧಿ ‘ಎಕ್ಸ್’ನಲ್ಲಿ ಪೋಸ್ಟ್ ಮೂಲಕ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಎನ್ಟಿಎಯಲ್ಲಿ ನಡೆಯುತ್ತಿರುವ ಬದಲಾವಣೆಗಳ ಗಮನ ಹರಿಸುವಂತೆ ಆಗ್ರಹಿಸಿದ್ದಾರೆ. ಪರೀಕ್ಷಾ ಅಕ್ರಮಗಳು ಮತ್ತು ಗೊಂದಲಗಳಿಗೆ ಯಾರು ಹೊಣೆ ಎಂಬುದನ್ನು
ಕೇಂದ್ರ
ಸರ್ಕಾರ ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ
ಮುಂದುವರಿದಂತೆ, ಯುಜಿಸಿ-ನೆಟ್ ಮರು ಪರೀಕ್ಷೆ ನಿರ್ಧಾರವು ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಮತ್ತೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಎಕ್ಸಾಮ್ ಸಲುವಾಗಿ ಸಿದ್ಧತೆ ನಡೆಸಿದ್ದ ಸಾವಿರಾರು ವಿದ್ಯಾರ್ಥಿಗಳಿಗೆ ಈ ನಡೆಯಿಂದ ಮತ್ತೆ ಒತ್ತಡ ಹೆಚ್ಚಾಗಿದೆ ಎಂದಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿಯುತವಾಗಿ ನಡೆದುದುಕೊಳ್ಳಬೇಕು ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಇನ್ನು, ಎನ್ಟಿಎ ಈಗಾಗಲೇ ಹಲವು ಬಾರಿ ಪರೀಕ್ಷೆಗಳಿಗೆ ಸಂಬಂಧಿಸಿದ ವಿವಾದಗಳನ್ನು ಎದುರಿಸಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಸುಧಾರಣೆ ತರಲು ಕಟ್ಟುನಿಟ್ಟಿನ ಭದ್ರತಾ ಕ್ರಮಗಳ ಅಗತ್ಯವಿದ್ದು, ಈ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದೆ,(ಏಜೆನ್ಸೀಸ್).