ಆಫ್‌ಲೈನ್ ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆಯು ದೊಡ್ಡ ಸಮಾಧಾನಕರ ಸುದ್ದಿ ನೀಡಿದ್ದು, ಇನ್ನು ಮುಂದೆ ಸಾರ್ವಜನಿಕರು ತಾವು ಟಿಕೆಟ್ ಬುಕ್ ಮಾಡಿದ ನಿಲ್ದಾಣಕ್ಕೇ ಹೋಗಬೇಕೆಂದಿಲ್ಲ, ಬದಲಾಗಿ ಯಾವುದೇ ರೈಲ್ವೆ ನಿಲ್ದಾಣದಿಂದ ಆಫ್‌ಲೈನ್ ಟಿಕೆಟ್‌ಗಳನ್ನು ರದ್ದುಗೊಳಿಸಬಹುದು. ಇದರೊಂದಿಗೆ, ಪ್ರಯಾಣಿಕರು ತಮ್ಮ ಬೋರ್ಡಿಂಗ್ ಪಾಯಿಂಟ್ ಬದಲಾಯಿಸುವ ಪ್ರಕ್ರಿಯೆಯನ್ನೂ ಸರಳಗೊಳಿಸಲಾಗಿದ್ದು, ಮೊಬೈಲ್ ಅಪ್ಲಿಕೇಶನ್ ಮೂಲಕ ಸುಲಭವಾಗಿ ನವೀಕರಿಸಬಹುದಾಗಿದೆ.