ನವದೆಹಲಿಗೆ ತೆರಳುತ್ತಿದ್ದ ರೈಲು ಬೆಳಗಿನ ಜಾವ 2:17 ಕ್ಕೆ ಅಪಘಾತಕ್ಕೀಡಾಗಿದೆ. ಹೊಜೈ ಜಿಲ್ಲೆಯ ಚಾಂಗ್ಜುರೈ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಐದು ಬೋಗಿಗಳು ಮತ್ತು ರೈಲಿನ ಎಂಜಿನ್ ಹಳಿತಪ್ಪಿದ್ದು, ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ಈಶಾನ್ಯ ಗಡಿನಾಡು ರೈಲ್ವೆ (ಎನ್‌ಎಫ್‌ಆರ್) ವಕ್ತಾರರು ತಿಳಿಸಿದ್ದಾರೆ.